ರೆಮಲ್ ಚಂಡಮಾರುತ| ಬಂಗಾಳದಲ್ಲಿ ಭೂಕುಸಿತ ಸಾಧ್ಯತೆ; ವಿಮಾನ, ರೈಲುಗಳು ರದ್ದು

Date:

ರೆಮಲ್ ಚಂಡಮಾರುತ ಇಂದು (ಮೇ 26) ರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದ್ದು, ಭೂಕುಸಿತ ಉಂಟಾಗುವ ನಿರೀಕ್ಷೆಯಿದೆ. ಹಾಗೆಯೇ ಬಂಗಾಳದಲ್ಲಿ ವಿಮಾನಗಳು ಮತ್ತು ರೈಲುಗಳನ್ನು ರದ್ದುಗೊಳಿಸಲಾಗಿದೆ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ರೆಮಲ್ ಚಂಡಮಾರುತವು ಭಾನುವಾರ ರಾತ್ರಿ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿಯ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ.

ಇದನ್ನು ಓದಿದ್ದೀರಾ?  ಮೇ 26ರಂದು ‍ಬಂಗಾಳಕೊಲ್ಲಿಯಲ್ಲಿ ಉಂಟಾಗಲಿದೆ’ರೆಮಲ್ ಚಂಡ‌ಮಾರುತ’ ಭಾರೀ ಮಳೆ ಸಾಧ್ಯತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನ್ನೆಚ್ಚರಿಕೆ ಕ್ರಮವಾಗಿ, ಪೂರ್ವ ಮತ್ತು ಆಗ್ನೇಯ ರೈಲ್ವೆಗಳು ಪಶ್ಚಿಮ ಬಂಗಾಳದಲ್ಲಿ ಹಲವಾರು ರೈಲುಗಳನ್ನು ರದ್ದುಗೊಳಿಸಿದರೆ, ಕೋಲ್ಕತ್ತಾ ವಿಮಾನ ನಿಲ್ದಾಣವು ಸೋಮವಾರ ಬೆಳಗಿನವರೆಗೆ 21 ಗಂಟೆಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

ದೇಶೀಯ ಮತ್ತು ಅಂತರರಾಷ್ಟ್ರೀಯ ಸೇರಿದಂತೆ ಕನಿಷ್ಠ 394 ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ನಡುವೆ ವಿಪತ್ತು ನಿರ್ವಹಣಾ ತಂಡಗಳು ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ಮಾಡುತ್ತಿದೆ.

ಇನ್ನು ವಿಮಾನ ರದ್ದು ಮಾಡಿರುವ ಬಗ್ಗೆ ಇಮೇಲ್ ಅಥವಾ ನೋಂದಾಯಿತ ಫೋನ್ ಸಂಖ್ಯೆಯ ಮೂಲಕ ವಿಮಾನಯಾನ ಸಂಸ್ಥೆಗಳು ನಮಗೆ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ದೂರಿದ್ದಾರೆ. ಕೆಲವು ಪ್ರಯಾಣಿಕರು ವಿಮಾನಯಾನ ಸಂಸ್ಥೆಯಿಂದ ಹೋಟೆಲ್ ವೆಚ್ಚ ಮತ್ತು ಆಹಾರ ಭತ್ಯೆಯ ಆಗ್ರಹ ಮಾಡಿದ್ದಾರೆ.

ಇನ್ನು ಅಧಿಕಾರಿಗಳು ಪಶ್ಚಿಮ ಬಂಗಾಳದ ದಿಘಾ ಬೀಚ್‌ನಿಂದ ಪ್ರವಾಸಿಗರನ್ನು ತುರ್ತು ಸ್ಥಳಾಂತರ ಮಾಡಿದ್ದಾರೆ. ಇನ್ನು ದಕ್ಷಿಣ 24 ಪರಗಣ ಜಿಲ್ಲೆಯ ಗೋಸಾಬಾ ಮತ್ತು ಸುಂದರಬನ್ಸ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ಬಕ್ಕಲಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...