ರೆಮಲ್ ಚಂಡಮಾರುತ| ಬಂಗಾಳ, ಬಾಂಗ್ಲಾದೇಶದಲ್ಲಿ 16 ಮಂದಿ ಸಾವು

Date:

ವರ್ಷದ ಮೊದಲ ಪ್ರಮುಖ ಚಂಡಮಾರುತವಾದ ರೆಮಲ್ ಚಂಡಮಾರುತ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ 16 ಜನರ ಸಾವಿಗೆ ಕಾರಣವಾಗಿದೆ. ಕರಾವಳಿ ತೀರದಲ್ಲಿ ಅಪ್ಪಳಿಸಿದ ಈ ಚಂಡಮಾರುತದಿಂದಾಗಿ ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದಾರೆ. ಲಕ್ಷಾಂತರ ಮನೆಗಳಿಗೆ ವಿದ್ಯುತ್ ಕಡಿತ ಮಾಡಲಾಗಿದೆ.

“ಬಾಂಗ್ಲಾದೇಶದಲ್ಲಿ ಈವರೆಗೆ ಕನಿಷ್ಠ 10 ಜನರು ರೆಮಲ್ ಚಂಡಮಾರುತದಿಂದಾಗಿ ಸಾವನ್ನಪ್ಪಿದ್ದಾರೆ” ಎಂದು ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಸಚಿವ ಮೊಹಿಬುರ್ ರೆಹಮಾನ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರಲ್ಲಿ ಕೆಲವರು ನೀರಿನಲ್ಲು ಮುಳುಗಿ ಸಾವನ್ನಪ್ಪಿದರೆ, ಇನ್ನು ಕೆಲವರು ಮನೆ ಕುಸಿದು, ಗೋಡೆ ಕುಸಿದು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಬಾಂಗ್ಲಾದೇಶದಲ್ಲಿ ಭೋಲಾ ಮತ್ತು ಬಾರಿಸಾಲ್ ಜಿಲ್ಲೆಗಳಲ್ಲಿ ಮೂವರು ಮತ್ತು ಸತ್ಖಿರಾ, ಖುಲ್ನಾ, ಚಿತ್ತಗಾಂಗ್ ಮತ್ತು ಪಟುಖಾಲಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ?  ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ಭಾರತದ ಪಶ್ಚಿಮ ಬಂಗಾಳ ರಾಜ್ಯದಲ್ಲಿ, ನಾಲ್ಕು ಜನರು ವಿದ್ಯುದಾಘಾತದಿಂದಾಗಿ ಸಾವನ್ನಪ್ಪಿದ್ದು ಒಟ್ಟು ಮೃತರ ಸಂಖ್ಯೆಯು ಆರಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉಭಯ ರಾಷ್ಟ್ರಗಳಲ್ಲಿ ಸುಮಾರು ಒಂದು ಮಿಲಿಯನ್ ಜನರನ್ನು ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಬಾಂಗ್ಲಾದೇಶದಲ್ಲಿ ಸುಮಾರು 800,000 ಮತ್ತು ಭಾರತದಲ್ಲಿ ಸರಿಸುಮಾರು 110,000 ಜನರನ್ನು ಸ್ಥಳಾಂತರಿಸಲಾಗಿದೆ.

ಇನ್ನು ಚಂಡಮಾರುತದ ವೇಳೆ ವಿದ್ಯುತ್‌ ಅವಘಡವನ್ನು ತಪ್ಪಿಸಲು ಬಾಂಗ್ಲಾದೇಶದ ಅಧಿಕಾರಿಗಳು ಮುಂಚಿತವಾಗಿ ಅನೇಕ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದ್ದರು. ಆದರೆ ಕೆಲವೆಡೆ ವಿದ್ಯುತ್ ಸಂಪರ್ಕವಿದ್ದರೂ ಕೂಡಾ ಮರ ಬಿದ್ದು ವಿದ್ಯುತ್ ಪೂರೈಕೆಗೆ ಅಡ್ಡಿಯಾಗಿದೆ ಎಂದು ವಿದ್ಯುತ್ ಸಚಿವಾಲಯದ ಅಧಿಕಾರಿಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಮಿಜೋರಾಂ, ಅಸ್ಸಾಂನಲ್ಲಿ 16 ಮಂದಿ ಸಾವು

ರೆಮಲ್ ಚಂಡಮಾರುತದಿಂದಾಗಿ ಮಿಜೋರಾಂನಲ್ಲಿ ಸುಮಾರು 15 ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಕಾರ್ಮಿಕರು ಕಲ್ಲಿನ ಕ್ವಾರೆ ಕುಸಿತದಲ್ಲಿ ಸಿಲುಕಿ ಬಿದಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಮಾಹಿತಿ ನೀಡಿದ್ದಾರೆ. ಇನ್ನು ಸರ್ಕಾರವು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಇದನ್ನು ಓದಿದ್ದೀರಾ?  ರೆಮಲ್ ಚಂಡಮಾರುತದಿಂದ ಭೂಕುಸಿತ: ಬಂಗಾಳದಲ್ಲಿ ಒಂದು ಲಕ್ಷ ಜನರ ಸ್ಥಳಾಂತರ

ಇನ್ನು ಅಸ್ಸಾಂನಲ್ಲಿ ರೆವಲ್ ಚಂಡಮಾರುತದಿಂದ ಭಾರೀ ಮಳೆ ಸುರಿದಿದ್ದು 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಕೌಶಿಕ್ ಬರ್ದೊಲಾಯಿ ಎಂಬ ಬಾಲಕ ಆಟೋ ರಿಕ್ಷಾದಲ್ಲಿ ಪ್ರಯಾಣ ಮಾಡುತ್ತಿದ್ದಾಗ ಗಾಳಿ ಮಳೆಗೆ ಮರ ಬಿದ್ದು ಸಾವನ್ನಪ್ಪಿದ್ದಾನೆ. ಇನ್ನೂ ನಾಲ್ಕು ವಾಹನಗಳಿಗೆ ಹಾನಿಯಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...