ರೆಮಲ್ ಚಂಡಮಾರುತದಿಂದ ಭೂಕುಸಿತ: ಬಂಗಾಳದಲ್ಲಿ ಒಂದು ಲಕ್ಷ ಜನರ ಸ್ಥಳಾಂತರ

Date:

ತೀವ್ರ ರೆಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭೂಕುಸಿತ ಉಂಟಾಗಿದ್ದು ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ರೆಮಲ್ ಚಂಡಮಾತುತವು ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ರಾತ್ರಿ 9.15 ರ ಸುಮಾರಿಗೆ ಭೂಕುಸಿತ ಉಂಟು ಮಾಡಿದೆ. ಭಾನುವಾರ ತೀವ್ರಗೊಂಡ ರೆಮಲ್ ಚಂಡಮಾರುತವು ಉತ್ತರದ ಕಡೆಗೆ ಚಲಿಸಿದೆ.

ಭೂಕುಸಿತಕ್ಕೆ ಕಾರಣವಾದ ತೀವ್ರ ಚಂಡಮಾರುತ ‘ರೆಮಲ್’ ಗಂಟೆಗೆ 135 ಕಿಲೋಮೀಟರ್ ವೇಗದಲ್ಲಿ ಸಾಗಿದೆ. ಮೇ 27ರಂದು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಇನ್ನೂ ಭಾರೀ ಮಳೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದ ಆಡಳಿತವು ದಕ್ಷಿಣ 24 ಪರಗಣಗಳು, ಉತ್ತರ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ತಗ್ಗು ಪ್ರದೇಶಗಳಿಂದ ಮತ್ತು ಕರಾವಳಿ ಪ್ರದೇಶಗಳಿಂದ ಜನರನ್ನು ಚಂಡಮಾರುತದ ಆಶ್ರಯಕ್ಕೆ ಸ್ಥಳಾಂತರಿಸಿದೆ. ನಿನ್ನೆ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಕರಾವಳಿ ಮತ್ತು ದುರ್ಬಲ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ. ಇನ್ನು ಬಾಂಗ್ಲಾದೇಶದಲ್ಲಿ 8 ಲಕ್ಷ ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ರೆಮಲ್ ಚಂಡಮಾರುತ| ಬಂಗಾಳದಲ್ಲಿ ಭೂಕುಸಿತ ಸಾಧ್ಯತೆ; ವಿಮಾನ, ರೈಲುಗಳು ರದ್ದು

ಚಂಡಮಾರುತದ ಪರಿಣಾಮವಾಗಿ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳದ ಇತರ ಭಾಗಗಳಲ್ಲಿ ವಿಮಾನ, ರೈಲು ಮತ್ತು ರಸ್ತೆ ಸಾರಿಗೆಯಲ್ಲಿ ಅಡಚಣೆಯಾಗಿದೆ. ಪೂರ್ವ ಮತ್ತು ಆಗ್ನೇಯ ರೈಲ್ವೆಗಳು ಭಾನುವಾರ ಮತ್ತು ಸೋಮವಾರದವರೆಗೆ ಹಲವಾರು ರೈಲುಗಳನ್ನು ರದ್ದುಗೊಳಿಸಿವೆ. ಕೋಲ್ಕತ್ತಾ ಮತ್ತು ಸುಂದರಬನ್‌ಗಳಲ್ಲಿ ದೋಣಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಭೂಕುಸಿತ

ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಭಾನುವಾರ ಮಧ್ಯಾಹ್ನದಿಂದ 21 ಗಂಟೆಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ಅಂತರರಾಷ್ಟ್ರೀಯ ಮತ್ತು ದೇಶೀಯ 394 ವಿಮಾನಗಳು ರದ್ದಾಗಿದೆ. ಕೋಲ್ಕತ್ತಾದ ಶ್ಯಾಮ ಪ್ರಸಾದ್ ಮುಖರ್ಜಿ ಬಂದರು ಭಾನುವಾರ ಸಂಜೆಯಿಂದ 12 ಗಂಟೆಗಳ ಕಾಲ ಸರಕು ಮತ್ತು ಕಂಟೈನರ್ ನಿರ್ವಹಣೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

ರೆಮಲ್ ಚಂಡಮಾರುತದ ಪ್ರಭಾವಕ್ಕೆ ಹುಲ್ಲಿನ ಗುಡಿಸಲುಗಳ ಮೇಲ್ಛಾವಣಿಗಳು ಹಾರಿಹೋದರೆ, ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ. ಕೋಲ್ಕತ್ತಾ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಸ್ತವ್ಯಸ್ತತೆ ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...