ದಲಿತ ಬಾಲಕನಿಗೆ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು: ಮೂವರ ಬಂಧನ

Date:

ಜಾತಿವಾದಿ ಪ್ರಬಲ ಜಾತಿಯ ದುಷ್ಕರ್ಮಿಗಳು ದಲಿತ ಅಪ್ರಾಪ್ತ ಬಾಲಕನಿಗೆ ಅಮಾನವೀಯವಾಗಿ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಜಾತಿ ದೌರ್ಜನ್ಯದ ಈ ಘಟನೆ ನಡೆಸಿದ್ದು, ಗುರುವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

15 ವರ್ಷ ವಯಸ್ಸಿನ ಸಂತ್ರಸ್ತ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೌಂಡ್ ಮಿಕ್ಸರ್ ಮತ್ತು ಆಡಿಯೊ ಸಿಸ್ಟಮ್‌ಗಳನ್ನು ಹೊಂದಿಸುವ ಕೌಶಲ್ಯವನ್ನು ಕಲಿತಿದ್ದರು. ಮಂಗಳವಾರ ಅದೇ ಕೆಲಸಕ್ಕೆ ತೆರಳಿದ್ದರು. ಅಂದಿನ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಕಿಶನ್ ತಿವಾರಿ, ದಿಲೀಪ್ ಮಿಶ್ರಾ ಮತ್ತು ಸತ್ಯಂ ತಿವಾರಿ ಎಂಬುವರು ಆತನ ಮೇಲೆ ಜಾತಿ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಲೀಪ್ ಮಿಶ್ರಾ ಮದ್ಯದ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸತ್ಯಂ ಮತ್ತು ಕಿಶನ್ ಬಾಲಕನನ್ನು ಹಿಡಿದುಕೊಂಡಿದ್ದಾರೆ. ಮೂತ್ರವಿದ್ದ ಬಾಟಲಿಯನ್ನು ಬಾಲಕನ ಬಾಯಿಗೆ ಬಲವಂತವಾಗಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಆರೋಪಿಗಳ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಿಯೊ ಮಿಕ್ಸಿಂಗ್‌ಗಾಗಿ ಬಾಲಕನನ್ನು ಕರೆಸಿದ್ದರು. ಆ ಕೆಲಸಕ್ಕೆ ಬಾಲಕ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕಾಗಿ ಆರೋಪಿಗಳು ಆತನ ಮೇಲೆ ಸಿಟ್ಟಾಗಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

“ಆರೋಪಿಗಳು ಅಪ್ರಾಪ್ತರೊಂದಿಗೆ ಅನುಚಿತವಾಗಿ ವರ್ತಿಸಿ, ಥಳಿಸಿದ್ದಾರೆ. ಅವರಲ್ಲಿ ಒಬ್ಬರು ಇಡೀ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ” ಎಂದು ಗಿಲೌಲಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಹಿಮಾ ನಾಥ್ ಉಪಾಧ್ಯಾಯ ಹೇಳಿದ್ದಾರೆ.

ಸಂತ್ರಸ್ತ ಬಾಲಕ ಮನೆಗೆ ಬಂದು ತನ್ನ ಅಣ್ಣನಿಗೆ ಘಟನೆಯ ಬಗ್ಗೆ ಹೇಳಿಕೊಂಡಿದ್ದು, ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...