ಗುಜರಾತ್‌: ಕಳ್ಳತನದ ಶಂಕೆಯಲ್ಲಿ ದಲಿತ ಎಂಜಿನಿಯರ್‌ಗೆ ಸಹೋದ್ಯೋಗಿಗಳಿಂದ ಥಳಿತ

Date:

ಡೀಸೆಲ್ ಕಳವು ಮಾಡಿದ ಶಂಕೆಯಲ್ಲಿ ದಲಿತ ಸಮುದಾಯದ ಎಂಜಿನಿಯರ್‌ ಒಬ್ಬರನ್ನು ಐವರು ಸಹೋದ್ಯೋಗಿಗಳು ಥಳಿಸಿದ ಘಟನೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ನಡೆದಿದೆ.

ಪಾಲನ್‌ಪುರದ ಖಾಸಗಿ ಉತ್ಪಾದನಾ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದ 25 ವರ್ಷದ ವ್ಯಕ್ತಿಯನ್ನು ಸಹೋದ್ಯೋಗಿಗಳು ಥಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಸಂತ್ರಸ್ತರ ಮನೆಗೆ ಅವರ ಸಹೋದ್ಯೋಗಿಗಳು ಸೆಪ್ಟೆಂಬರ್ 28 ರಂದು ಭೇಟಿ ನೀಡಿದ್ದರು. ಸಹೋದ್ಯೋಗಿಯ ಹುಟ್ಟುಹಬ್ಬದ ಪಾರ್ಟಿಯ ನೆಪದಲ್ಲಿ ಅವರನ್ನು ಹೋಟೆಲ್‌ಗೆ ವಾಹನದಲ್ಲಿ ಹೊರಗೆ ಕರೆದುಕೊಂಡು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 209ರೂ. ಏರಿಕೆ

ಸೇತುವೆಯೊಂದರ ಮೇಲೆ ಕಾರನ್ನು ನಿಲ್ಲಿಸಿದ ಆರೋಪಿಗಳು ಡೀಸೆಲ್ ಕಳ್ಳತನ ಮಾಡುತ್ತಿದ್ದಾನೆ ಎಂದು ಆರೋಪಿಸಿ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಜಾತಿ ನಿಂದನೆ ಮಾಡಿ ತೀವ್ರವಾಗಿ ಥಳಿಸಿದ್ದಾರೆ. ಘಟನೆಯ ನಂತರ ಇಂಜಿನಿಯರ್‌ಗೆ ಮೂಳೆ ಮುರಿತ ಸೇರಿದಂತೆ ಹಲವು ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಪರಿಶಿಷ್ಟ ಜಾತಿ (ಎಸ್‌ಸಿ) ಸೆಲ್ ಅಧ್ಯಕ್ಷ ಹಿತೇಂದ್ರ ಪಿಠಾಡಿಯ ಮಾತನಾಡಿ, ಗುಜರಾತ್‌ನಲ್ಲಿ ದಲಿತರ ಮೇಲಿನ ದೌರ್ಜನ್ಯ ಘಟನೆಗಳು ಹೆಚ್ಚುತ್ತಿವೆ ಮತ್ತು ಸಮಾಜ ವಿರೋಧಿಗಳಿಗೆ ಕಾನೂನಿನ ಭಯವಿಲ್ಲ. ಈ ಘಟನೆ ನಡೆದು ಎರಡು ದಿನಗಳು ಕಳೆದಿವೆ, ಆದರೆ ಯಾವುದೇ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ, ಇದು ದಲಿತರ ಬಗ್ಗೆ ಗುಜರಾತ್ ಬಿಜೆಪಿ ಸರ್ಕಾರ ಮತ್ತು ಗುಜರಾತ್ ಪೊಲೀಸರ ವರ್ತನೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...