ಉತ್ತರ ಪ್ರದೇಶ | ದಲಿತ ಕುಟುಂಬದ ಮೇಲೆ ಹಲ್ಲೆ, ಪ್ರಕರಣ ದಾಖಲು

Date:

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಹಾಗೂ ಆತನ ಕುಟುಂಬದ ಸದಸ್ಯರ ಮೇಲೆ ಕಬ್ಬಿಣದ ರಾಡ್‌ಗಳಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಊಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಅನೈಚ್ ಗ್ರಾಮದಲ್ಲಿ ನಡೆದಿದೆ.

ದೀಪಕ್ ಕುಮಾರ್ ಪಾಸಿ ಹಲ್ಲೆಗೆ ಒಳಗಾದ ಯುವಕ. ಇವರು ಸ್ಥಳೀಯ ಗ್ರಾಮಸ್ಥರೊಬ್ಬರ ಹೊಲದಲ್ಲಿ ಬೇಸಾಯ ಮಾಡುತ್ತಿದ್ದರು. ಹೊಲಕ್ಕೆ ರಾಜಾರಾಮ್ ಯಾದವ್ ಎಂಬಾತನ ಹಸುಗಳು ಬಂದು ಬೆಳೆಯನ್ನು ತಿಂದು ಹಾಕುತ್ತಿದ್ದವು. ಈ ಬಗ್ಗೆ ದೀಪಕ್ ಕುಮಾರ್ ಅವರು ರಾಜಾರಾಮ್ ಬಳಿ ಹೇಳಿದ್ದರು. ಇದೇ ವಿಚಾರಕ್ಕೆ ದೀಪಕ್, ಆತನ ಪತ್ನಿ ಸುಮಿತ್ರಾ, ಸಹೋದರ ಮತ್ತು ತಾಯಿಯ ಮೇಲೆ ರಾಜಾರಾಮ್ ಯಾದವ್, ದಿಲಜೀತ್ ಯಾದವ್, ಅರವಿಂದ್ ಯಾದವ್, ರಾಜೇಂದ್ರ ಯಾದವ್, ಪಾರ್ವತಿ ದೇವಿ ಮತ್ತು ತಾರಾ ದೇವಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ದೀಪಕ್ ಮತ್ತು ಸುಮಿತ್ರಾ ಅವರಿಗೆ ಗಂಭೀರವಾದ ಗಾಯಗಳಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸದಂತೆ ಆರು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಈ ಜಗಳದಲ್ಲಿ ದೀಪಕ್ ಮತ್ತು ಸುಮಿತ್ರಾ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಒಬ್ಬ ಸದಸ್ಯರ ಪಕ್ಕೆಲುಬು ಮುರಿದ ಆರೋಪವೂ ಇದೆ.

ಘಟನೆಯ ನಂತರ, ದೂರು ನೀಡಲು ಸ್ಥಳೀಯ ಪೊಲೀಸ್ ಠಾಣೆಗೆ ಹೋದ ಸಂತ್ರಸ್ತರನ್ನು ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ವಾಪಸ್ ಕಳುಹಿಸಿದ್ದರು. ಇದಾದ ನಂತರ, ದೀಪಕ್‌ ಕುಮಾರ್‌ ಕುಟುಂಬವು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿತು. ಆನಂತರದಲ್ಲಿ ಮುಂದಿನ ತನಿಖೆಯ ಜವಾಬ್ದಾರಿಯನ್ನು ಮತ್ತೊಬ್ಬ ಅಧಿಕಾರಿ ಚಮನ್ ಸಿಂಗ್ ಚಾವ್ಡಾ ಅವರಿಗೆ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...