ದೇವಸ್ಥಾನದಲ್ಲಿ ದಲಿತ ಯುವತಿ ಮದುವೆಗೆ ಸವರ್ಣೀಯರಿಂದ ಅಡ್ಡಿ

Date:

ದಲಿತ ಯುವತಿ ದೇವಸ್ಥಾನದಲ್ಲಿ ಮದುವೆಯಾಗಲು ಬಂದಿದ್ದಾಗ, ಅವರ ವಿವಾಹಕ್ಕೆ ದೇವಾಲಯದ ಅರ್ಚಕ ಮತ್ತು ಸಹಚರರು ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ದೇವಾಲಯದಲ್ಲಿ ಜಾತಿ ತಾರತಮ್ಯ ಎಸಗಿದ ಆರೋಪದ ಮೇಲೆ ಅರ್ಚಕ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ.

ಪೌರಿ ಜಿಲ್ಲೆಯ ಕಥೂರ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ದಲಿತ ನಿವಾಸಿ ನಕುಲ್ ದಾಸ್ ಅವರ ಮಗಳಿಗೆ ವಿವಾಹ ನಿಶ್ಚಯವಾಗಿತ್ತು. ದೇವಸ್ಥಾನದಲ್ಲಿ ಮದುವೆ ಕಾರ್ಯ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ, ಆಕೆಯ ವಿವಾಹಕ್ಕೆ ಬ್ರಾಹ್ಮಣ ಸಮುದಾಯದ ಸದಸ್ಯರು ಅಡ್ಡಿಪಡಿಸಿದ್ದಾರೆ. ಮಾತ್ರವಲ್ಲದೆ, ದೇವಾಲಯದ ಯಜ್ಞಶಾಲೆಗೆ ಅರ್ಚಕ ಬೀಗ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ದೇವಾಲಯದಲ್ಲಿ ಜಾತಿ ದೌರ್ಜನ್ಯ ಎಸಗಿರುವ ಮಾಹಿತಿ ಪಡೆದ ಸ್ಥಳೀಯರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ದೇವಾಲಯದ ಬೀಗ ತೆರೆಸಿ, ಮದುವೆ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ. ಜಾತಿ ತಾರತಮ್ಯ ಪ್ರಕರಣದ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿಯ ತಂದೆ ನಕುಲ್ ದಾಸ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಹಣಕಾಸಿನ ತೊಂದರೆಯಿಂದಾಗಿ ನಮ್ಮ ಮಗಳ ಮದುವೆಯನ್ನು ಆದಿಶಕ್ತಿ ಮಾ ಭುವನೇಶ್ವರಿ ದೇವಸ್ಥಾನದಲ್ಲಿ ನಡೆಸಲು ನಿರ್ಧರಿಸಿದೆವು. ನಾವು ದೇವಾಲಯದ ಬೀಗವನ್ನು ತೆರೆಯಲು ಕೇಳಿದಾಗ, ನಮ್ಮ ಜಾತಿಯನ್ನು ಉಲ್ಲೇಖಿಸಿ ಅವಾಚ್ಯವಾಗಿ ನಿಂದಿಸಲಾಗಿದೆ. ನಮ್ಮ ಕುಟುಂಬದ ಮೇಲೆ ದೇವಾಲಯದ ಅರ್ಚಕರು ಮತ್ತು ಇತರರು ಜಾತಿ ತಾರತಮ್ಯ ಎಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...