ದಲಿತ ವರನ ವಿವಾಹ ಮೆರವಣಿಗೆಗೆ ವಿರೋಧ; ಸವರ್ಣೀಯರಿಂದ ಹಲವರ ಮೇಲೆ ಹಲ್ಲೆ

Date:

ದಲಿತ ವರನ ವಿವಾಹ ಮೆರವಣಿಗೆಗೆ ವಿರೋಧ ವ್ಯಕ್ತಪಡಿಸಿ ವರ ಸೇರಿದಂತೆ ಹಲವು ಮಂದಿ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ನಾಗ್ಲಾ ತಾಲ್ಫಿ ಪ್ರದೇಶದಲ್ಲಿ ನಡೆದಿದೆ.

ವಿವಾಹ ಮೆರವಣಿಗೆ ವೇಳೆ ಮೇಲ್ಜಾತಿಯ ಜನರ ಗುಂಪೊಂದು ದಲಿತ ವರನ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ ವರನ ಕಡೆಯ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಮಾಡಿ ಸವರ್ಣಿಯರ ವಿಕೃತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಗ್ಲಾ ತಾಲ್ಫಿ ನಿವಾಸಿ ಅನಿತಾ ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಬುಧವಾರ ಸಂಜೆ ಮಥುರಾದಿಂದ ಅವರ ಮಗಳ ಮದುವೆ ಮೆರವಣಿಗೆ ಆರಂಭವಾಗಿದ್ದು, ಈ ವೇಳೆ ಘಟನೆ ನಡೆಸಿದೆ. ಅಡೆತಡೆ ಉಂಟಾದ ಕಾರಣದಿಂದಾಗಿ ಗ್ರಾಮದಿಂದ ಸ್ವಲ್ಪ ದೂರದಲ್ಲಿದ್ದ ಮನೆಯಲ್ಲಿ ವಿವಾಹ ನಡೆಸಬೇಕಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂಗೀತದೊಂದಿಗೆ ಮೆರವಣಿಗೆ ಸಾಗುತ್ತಿದ್ದಂತೆ ಸವರ್ಣೀಯ ಪುರುಷರ ಗುಂಪೊಂದು ಕೋಲುಗಳು ಮತ್ತು ಲಾಠಿಗಳೊಂದಿಗೆ ಬಂದು ವರ ಮತ್ತು ಇತರ ಹಲವರ ಮೇಲೆ ಹಲ್ಲೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

“ದಾಳಿ ನಡೆಸಿದವರು ವರ ಮತ್ತು ಅವರ ಕುಟುಂಬದ ಹಲವರಿಗೆ ಥಳಿಸಿದ್ದಾರೆ. ಹಲ್ಲೆಯಿಂದಾಗಿ, ಮದುವೆ ಸ್ಥಳದಲ್ಲಿ ಯಾವುದೇ ಆಚರಣೆಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಇಡೀ ಸಮಾರಂಭವನ್ನು ನಮ್ಮ ಮನೆಯಲ್ಲೇ ಮಾಡಬೇಕಾಯಿತು” ಎಂದು ಅನಿತಾ ತಮ್ಮ ದೂರಿನಲ್ಲಿ ಹೇಳಿದ್ದಾರೆ.

“ದಾಳಿಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಸಹಾಯಕ ಪೊಲೀಸ್ ಆಯುಕ್ತ ಪಿ ಕೆ ರೈ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದಿಹುಲೀ ದಲಿತ ಹತ್ಯಾಕಾಂಡ; 44 ವರ್ಷ ನಡೆದ ಕೇಸಿನ ಬೆವರು-ನೆತ್ತರು-ಕಂಬನಿಯ ಕತೆಯೇನು?

ದಾಳಿಗೆ ಸಂಬಂಧಿಸಿದಂತೆ ಒಂಬತ್ತು ಪರಿಚಿತ ಮತ್ತು 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಈ ಹಿಂದೆಯೂ ದಲಿತ ಯುವಕನ ಮದುವೆ ಮೆರವಣಿಗೆ ಸವರ್ಣೀಯರು ಅಡ್ಡಿ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ಹಿಂದೆ ಕುದುರೆ ಮೇಲೆ ಮೆರವಣಿಗೆ ಮಾಡಿದ ಕಾರಣಕ್ಕೆ ದಲಿತ ವರನ ಮೇಲೆ 40 ಮಂದಿ ಪ್ರಬಲ ಜಾತಿಯ ದುರುಳರು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ರಾಜಸ್ಥಾನದ ಅಜ್ಮೈರ್‌ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ವರ ಕುದುರೆ ಏರಿ ದಿಬ್ಬಣದೊಂದಿಗೆ ವಿವಾಹ ನಿಗದಿಯಾದ ಸ್ಥಳಕ್ಕೆ ಬರಲು ಸವರ್ಣೀಯರ ವಿರೋಧ ವ್ಯಕ್ತವಾಗಿದ್ದ ಕಾರಣ ಸುಮಾರು 200 ಪೊಲೀಸರು ಭದ್ರತೆಯೊಂದಿಗೆ ವಿವಾಹವನ್ನು ನೆರವೇರಿಸಲಾಗಿತ್ತು.

ಇನ್ನು ಇತ್ತೀಚೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ದಿನವೇ ಇಂದೋರ್ ಜಿಲ್ಲೆಯ ದಲಿತ ವರ ದೇವಾಲಯ ಪ್ರವೇಶಿಸುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ಈ ಹಿನ್ನೆಲೆ ವರ ಪೊಲೀಸ್ ರಕ್ಷಣೆಯಲ್ಲಿ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಹೀಗೆ ದಲಿತರ ಮೇಲೆ ಇಂದಿಗೂ ಜಾತಿ ದೌರ್ಜನ್ಯ ನಿಂತಿಲ್ಲ. ದೇಶ ಎಷ್ಟು ಮುಂದುವರಿದರೂ ದಲಿತ ಮೇಲಿನ ದೌರ್ಜನ್ಯ ಒಂದಲ್ಲ ಒಂದು ರೀತಿಯಲ್ಲಿ ನಡೆಯುತ್ತಲೇ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...