ಅಂಬೇಡ್ಕರ್ ಹುಟ್ಟಿದ ನಾಡಿನಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶ ನಿರಾಕರಣೆ – ಜಾತಿ ದೌರ್ಜನ್ಯ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರು 134 ಜನ್ಮ ದಿನಾಚರಣೆಯಲ್ಲಿ ಏಪ್ರಿಲ್ 14ರಂದು (ಸೋಮವಾರ) ಆಚರಿಸಲಾಗಿದೆ. ಅದೇ ದಿನ, ಅಂಬೇಡ್ಕರ್ ಜನಸಿದ ಮಧ್ಯಪ್ರದೇಶದ ಇಂಧೋರ್ ಜಿಲ್ಲೆಯಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿ, ಜಾತಿ ದೌರ್ಜನ್ಯ ನಡೆಸಿರುವ ಘಟನೆ ನಡೆದಿದೆ.

ಬಾಬಾ ಸಾಹೇಬ್ಅಂಬೇಡ್ಕರರು 1891ರ ಏಪ್ರಿಲ್ 14ರಂದು ಇಂಧೋರ್ ಜಿಲ್ಲೆಯ ಮಾಹೋ ಗ್ರಾಮದಲ್ಲಿ ಜನಿಸಿದ್ದರು. ಇದೀಗ, 134 ವರ್ಷಗಳ ಬಳಿಕ ಇದೇ ಜಿಲ್ಲೆಯಲ್ಲಿ ಅಂಬೇಡ್ಕರ್ ಜನ್ಮ ದಿನದಂದೇ ಜಾತಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

ಇಂಧೋರ್ ಜಿಲ್ಲೆಯ ಸಾಂಘ್ವಿ ಗ್ರಾಮದಲ್ಲಿ ದಲಿತ ಜೋಡಿಯ ವಿವಾಹ ನಿಶ್ಚಯವಾಗಿತ್ತು. ಗ್ರಾಮಕ್ಕೆ ಬಂದ ವರನನ್ನು ಪೂಜೆ ಸಲ್ಲಿಸಲು ದೇವಾಸ್ಥಾನಕ್ಕೆ ಕರೆದೊಯ್ದಾಗ ಅವರನ್ನು ಗ್ರಾಮದ ಪ್ರಬಲ ಜಾತಿಯವರು ತಡೆದಿದ್ದಾರೆ. ವರ ದಲಿತ ಎಂಬ ಕಾರಣಕ್ಕಾಗಿ ದೇವಾಲಯ ಪ್ರವೇಶಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಮಾರು 2 ಗಂಟೆಗಳ ಕಾಲ ಜಾತಿವಾದಿ ಪ್ರಬಲ ಜಾತಿಯವರು ಮತ್ತು ವಧುವಿನ ಕುಟುಂಬದ ನಡುವೆ ವಾಗ್ವಾದ ನಡೆದಿದೆ. ಅಂತಿಮವಾಗಿ, ಸ್ಥಳಕ್ಕೆ ಪೊಲೀಸರನ್ನು ಕರೆಸಲಾಗಿದ್ದು, ಪೊಲೀಸರ ಸಮ್ಮುಖದಲ್ಲಿ ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಈ ವರದಿ ಓದಿದ್ದೀರಾ?: ‘ಕ್ರಾಂತಿ ಮತ್ತು ಪ್ರತಿಕ್ರಾಂತಿ’: ಅಂಬೇಡ್ಕರ್ ತೆರೆದಿಟ್ಟ ಬೌದ್ಧ ಭಾರತದ ಇತಿಹಾಸ

ಘಟನೆಯನ್ನು ಖಂಡಿಸಿರುವ ಅಖಿಲ ಭಾರತ ಬಲೈ ಮಹಾಸಂಘದ ಅಧ್ಯಕ್ಷ ಮನೋಜ್ ಪರ್ಮಾರ್, “ನಮ್ಮ ಸಮುದಾಯವು ಇನ್ನೂ ಜಾತಿ ತಾರತಮ್ಯ ಎದುರಿಸುತ್ತಿದೆ. ದಲಿತರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಘ್ವಿ ಗ್ರಾಮದಲ್ಲಿ, ಪರಿಶಿಷ್ಟ ಜಾತಿಯ ವರನನ್ನು ದೇವಸ್ಥಾನ ಪ್ರವೇಶಿಸದಂತೆ ತಡೆಯಲಾಗಿಲ್ಲ. ಬದಲಾಗಿ, ಗರ್ಭಗುಡಿ ಪ್ರವೇಶಿಸದಂತೆ ತಡೆಯಲಾಗಿದೆ. ಗರ್ಭಗುಡಿಗೆ ಅರ್ಚಕರು ಮಾತ್ರವೇ ಹೋಗಬಹುದು ಎಂಬುದು ಗ್ರಾಮದ ದೇವಾಲಯದ ನಿಯಮವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...