ಮಹಾರಾಷ್ಟ್ರ | ಮೇಲ್ಜಾತಿಯವರಿಂದ ಹಲ್ಲೆ ನಂತರ ದಲಿತ ಯುವಕ ಆತ್ಮಹತ್ಯೆ

Date:

ದಲಿತ ಯುವಕನೊಬ್ಬನ ಆತ್ಮಹತ್ಯೆಯ ನಂತರ ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಕೊಪ್ರಾಡಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮೃತ ಯುವಕನನ್ನು ವಿಠಲ್‌ ನಿತಿನ್ ಕಾಂತಿಲಾಲ್‌ ಶಿಂಧೆ ಎಂದು ಗುರುತಿಸಲಾಗಿದೆ. ಗ್ರಾಮದ ಸ್ಥಳೀಯ ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸಿದ ನಂತರ ಮೇಲ್ಜಾತಿ ಯುವಕರು ಹಲ್ಲೆ ನಡೆಸಿ ನಿಂದಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರದಿಯ ಪ್ರಕಾರ ವಿಠಲ್ ಹಿಂದೂ ಮಹರ್‌ ದಲಿತ ಸಮುದಾಯದ ಸದಸ್ಯರಾಗಿದ್ದರು. ಮೇಲ್ಜಾತಿ ಮರಾಠ ಸಮುದಾಯದ ಕೆಲವರಿಂದ ವಿರೋಧಕ್ಕೆ ಒಳಗಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್‌ಐಆರ್‌ನಲ್ಲಿರುವಂತೆ ವಿಠಲ್‌ ತಂದೆ ಕಾಂತಿಲಾಲ್‌ ಅವರ ಹೇಳಿಕೆಯ ಪ್ರಕಾರ, ಮೇ 1ರಂದು ತಮಾಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮೇಲ್ಜಾತಿ ಯುವಕರು ನಿಂದಿಸಿ ವಿಠಲ್‌ ಮೇಲೆ ಹಲ್ಲೆ ನಡೆಸಿದ್ದಾರೆ. ವಿಠಲ್‌ನನ್ನು ಸ್ಮಶಾಣ ಭೂಮಿಗೆ ಕರೆದೋಯ್ದು ಅಲ್ಲಿಯೂ ಜಗಳ ಪ್ರಾರಂಭಿಸಿ ಆತನ ಮೈಮೇಲಿದ್ದ ಬಟ್ಟೆಯನ್ನು ಬಲವಂತವಾಗಿ ಕಿತ್ತೆಸೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಗಾಯಗೊಂಡು ಮನೆಗೆ ಮರಳಿದ ವಿಠಲ್‌ ಮೇಲ್ಜಾತಿ ಜನರ ದೌರ್ಜನ್ಯ ಹಾಗೂ ಅವಮಾನದಿಂದ ಮನನೊಂದು ಮರುದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಆತ್ಮಹತ್ಯೆ ಚೀಟಿ ಬರೆದಿಟ್ಟಿದ್ದು, ಇದರಲ್ಲಿ ಇಬ್ಬರು ಪ್ರಮುಖ ಆರೋಪಿಗಳ ಬಗ್ಗೆ ವಿವರಿಸಿದ್ದಾರೆ.

ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವ ಪೊಲೀಸರು ಆರೋಪಿಗಳ ವಿರುದ್ಧ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ಪ್ರಮುಖ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಘಟನೆಯ ನಂತರ ವಿಠಲ್‌ ಕುಟುಂಬದವರ ಜೊತೆ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದರು. ಮೃತ ವಿಠಲ್ ಪೋಷಕರ ಜೊತೆ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...