ಗುಜರಾತ್ | ‘ಶಿಕ್ಷಣಕ್ಕೆ ಅರ್ಹನಲ್ಲ’ ಎಂದು ನಿಂದಿಸಿ ದಲಿತ ವಿದ್ಯಾರ್ಥಿ ಮೇಲೆ ಶಾಲಾ ಮಾಲೀಕನಿಂದ ಹಲ್ಲೆ

Date:

15 ವರ್ಷದ ದಲಿತ ವಿದ್ಯಾರ್ಥಿಯ ವಿರುದ್ಧ ಶಾಲೆಯ ಮಾಲೀಕರೊಬ್ಬರು ‘ಶಿಕ್ಷಣಕ್ಕೆ ಅರ್ಹನಲ್ಲ’ ಎಂದು ಜಾತಿ ನಿಂದನೆ ಮಾಡಿದ ಘಟನೆ ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ನಡೆದಿದೆ. ವಂಕನೇರ್‌ನ ಗ್ಯಾನ್ ಗಂಗಾ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯ ಮೇಲೆ ಶಾಲಾ ಮಾಲೀಕ ಯೋಗೇಂದ್ರಸಿಂಹ ಝಲಾ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕಿಯರ ಶಾಲೆಯ ಬಳಿ ಬಾಲಕ ತಿಂಡಿ ಸೇವಿಸುತ್ತಿದ್ದಾಗ ಶಾಲೆಯ ಮಾಲೀಕ ಝಲಾ ಬಾಲಕನ ಬಳಿ ಬಂದು ಜಾತಿ ಆಧಾರಿತ ನಿಂದನೆಗಳನ್ನು ಮಾಡಿದ್ದು ಮಾತ್ರವಲ್ಲದೆ “ನೀನು ಶಿಕ್ಷಣಕ್ಕೆ ಅರ್ಹನಲ್ಲ” ಎಂದು ಹೇಳಿ ಆತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ದಲಿತ ವಿದ್ಯಾರ್ಥಿಯ ಎರಡೂ ಕೈ ಕತ್ತರಿಸಿ ವಿಕೃತಿ ಮೆರೆದ ಸವರ್ಣೀಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

40 ವರ್ಷದ ನೈರ್ಮಲ್ಯ ಕಾರ್ಮಿಕನಾಗಿರುವ ಬಾಲಕನ ತಂದೆಗೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಥಳೀಯ ನಿವಾಸಿ ಸಿದ್ಧಾರ್ಥ್ ವಘೇಲಾ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು ನಂತರ ಬಾಲಕನನ್ನು ವಂಕನೇರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲ್ಲೆಯಿಂದಾಗಿ ಪ್ರಜ್ಞೆ ಕಳೆದುಕೊಂಡ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ವಂಕನೇರ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 115(2), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನಿಖೆಯನ್ನು ಮೊರ್ಬಿ ಎಸ್‌ಸಿ-ಎಸ್‌ಟಿ ಸೆಲ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಹಸ್ತಾಂತರಿಸಲಾಗಿದೆ. ಅಧಿಕಾರಿಗಳು ಪ್ರಸ್ತುತ ಝಲಾ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...