ಉತ್ತರ ಪ್ರದೇಶ: ದಲಿತ ಮಹಿಳೆಯ ಅತ್ಯಾಚಾರವೆಸಗಿ, ತುಂಡುತುಂಡಾಗಿ ಕತ್ತರಿಸಿ ಭೀಕರ ಹತ್ಯೆ

Date:

40 ವರ್ಷದ ದಲಿತ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿದ ನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಹತ್ಯೆಗೀಡಾದ ಮಹಿಳೆ ರಾಜ್‌ಕುಮಾರ್ ಶುಕ್ಲಾ ಎಂಬುವವರ ಮನೆಗೆ ಹಿಟ್ಟಿನ ಗಿರಣಿಯನ್ನು ಸ್ವಚ್ಛಗೊಳಿಸಲು ಹೋಗಿದ್ದರು. ಆಕೆಯ 20 ವರ್ಷದ ಮಗಳು ಶುಕ್ಲಾ ಮನೆಯ ಬಳಿ  ತಲುಪಿದಾಗ ಒಳಗಿನಿಂದ ಚಿಲಕ ಹಾಕಿದ ಕೋಣೆಯಿಂದ ತಾಯಿಯ ಕಿರುಚಾಟ ಕೇಳಿದೆ ಎಂದು ಸ್ಟೇಷನ್ ಹೌಸ್ ಪೊಲೀಸ್ ಅಧಿಕಾರಿ ಸಂದೀಪ್ ತಿವಾರಿ ತಿಳಿಸಿದ್ದಾರೆ.

ಬಾಲಕಿಯು ಸ್ವಲ್ಪ ಸಮಯದ ನಂತರ ಕೋಣೆಯ ಬಾಗಿಲು ತೆರೆದಾಗ  ತಾಯಿಯ ಶವ ಮೂರು ತುಂಡುಗಳಾಗಿ ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ನಂತರ,  ಮಾಲೀಕ ರಾಜ್‌ಕುಮಾರ್ ಶುಕ್ಲಾ, ಅವರ ಸಹೋದರ ಬೌವಾ ಶುಕ್ಲಾ ಮತ್ತು ರಾಮಕೃಷ್ಣ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಇವರ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮಾಯಕ ಕಂದಮ್ಮಗಳು ಸಾಯುತ್ತಿವೆ, ಜಗತ್ತು ಮೌನವಾಗಿದೆ: ಕ್ರಿಕೆಟಿಗ ಇರ್ಫಾನ್ ಪಠಾಣ್ ನೋವಿನ ನುಡಿ

ಅಮಾನುಷ ಘಟನೆಯ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಂದಾದಲ್ಲಿ ದಲಿತ ಮಹಿಳೆಯೊಬ್ಬರ ಅತ್ಯಾಚಾರ ಮತ್ತು ಭೀಕರ ಹತ್ಯೆಯ ಸುದ್ದಿ ಹೃದಯ ವಿದ್ರಾವಕವಾಗಿದೆ. ಉತ್ತರ ಪ್ರದೇಶದ ಮಹಿಳೆಯರು ಭಯಗೊಂಡಿದ್ದಾರೆ ಮತ್ತು ಕೋಪಗೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ಐಐಟಿ-ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳನ್ನು ವಿವಸ್ತ್ರಗೊಳಿಸಿ ಅಸಭ್ಯ ವಿಡಿಯೋಗಳನ್ನು ರೆಕಾರ್ಡ್ ಮಾಡಿದ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಉಲ್ಲೇಖಿಸಿದ್ದಾರೆ.

“ಐಐಟಿ-ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳನ್ನು ವಿವಸ್ತ್ರಗೊಳಿಸಿದ ನಂತರ ವಿಡಿಯೋ ಮಾಡಿದ ಘಟನೆಯು ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಮುಖದ ಮೇಲೆ ಕಪಾಳಮೋಕ್ಷವಾಗಿದೆ. ಈ ಘಟನೆಗಳು ಬಿಜೆಪಿಯ ಶೂನ್ಯ ಸಹಿಷ್ಣುತೆಯ ದೊಡ್ಡ ಸುಳ್ಳನ್ನು ಬಹಿರಂಗಪಡಿಸುತ್ತದೆ” ಎಂದು ಅಖಿಲೇಶ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...