ಉತ್ತರ ಪ್ರದೇಶ | ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಪೊಲೀಸ್

Date:

ಪೊಲೀಸ್ ಕಾನ್ಸ್‌ಟೆಬಲ್‌ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬಳನ್ನು ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಇಂದು ನಡೆದಿದೆ.

ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್‌ ಬಾಡಿಗೆಯಿದ್ದ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೊಲೀಸರ ವರದಿಯ ಪ್ರಕಾರ ಮಹಿಳೆಯು ಪೊಲೀಸ್ ಕಾನ್ಸ್‌ಟೆಬಲ್‌ ಮನೆಗೆ ಘಟನೆ ಸಂಭವಿಸಿದ ಒಂದು ದಿನ ಮುನ್ನ ಭೇಟಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“27 ವರ್ಷದ ಪೊಲೀಸ್‌ ಕಾನ್ಸ್‌ಟೆಬಲ್‌ ರಾಘವೇಂದ್ರ ಸಿಂಗ್‌ ಎಂಬಾತನನ್ನು 25 ವರ್ಷದ ದಲಿತ ಸಮುದಾಯದ ಮಹಿಳೆಯ ಕೊಲೆಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 306, 376 ಹಾಗೂ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಸಹಾಯಕ ಪೊಲೀಸ್‌ ಆಯುಕ್ತರಾದ ಆರ್‌ ಕೆ ಸಿಂಗ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

“ಮೂಲತಃ ಝಾನ್ಸಿಯ ಪ್ರದೇಶದವನಾದ ಕಾನ್ಸ್‌ಟೆಬಲ್‌ ರಾಘವೇಂದ್ರ ಸಿಂಗ್‌ ಆಗ್ರಾದ ಬೆಳನ್‌ಗಂಜ್‌ ಪ್ರದೇಶದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ. ಮೃತ ಮಹಿಳೆ ಹಾಗೂ ಆರೋಪಿ ಕಲೇದ ಕೆಲ ದಿನಗಳಿಂದ ಪರಿಚಿತರಾಗಿದ್ದರು. ಮಹಿಳೆಯು ಸ್ಥಳೀಯ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಳು” ಎಂದು ಆರ್‌ ಕೆ ತಿಳಿಸಿದ್ದಾರೆ.

ಮಹಿಳೆಯ ಕುಟುಂಬದ ಸದಸ್ಯರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ಝಾನ್ಸಿಯಲ್ಲಿ ಮಹಿಳೆ ನರ್ಸಿಂಗ್‌ ತರಬೇತಿ ಪಡೆಯುತ್ತಿದ್ದ ದಿನದಿಂದಲೂ ಆರೋಪಿಯು ಆಕೆಯೊಂದಿಗೆ ಸಂಪರ್ಕದಲ್ಲಿದ್ದ ಎಂದು ಮಹಿಳೆಯ ಸಹೋದರ ತಿಳಿಸಿದ್ದಾರೆ.

“ನಾವು ರಾಘವೇಂದ್ರ ಸಿಂಗ್‌ ಮನೆಗೆ ಕೂಡ ಭೇಟಿ ನೀಡಿದ್ದೆವು. ಆದರೆ ನಮ್ಮ ತಂಗಿಯೊಟ್ಟಿಗೆ ಮದುವೆ ಪ್ರಸ್ತಾಪವನ್ನು ಆರೋಪಿಯ ಕುಟುಂಬ ನಿರಾಕರಿಸಿತ್ತು. ಆದರೂ ಈತ ನಮ್ಮ ತಂಗಿಯೊಂದಿಗೆ ಸಂಪರ್ಕದಲ್ಲಿದ್ದ” ಎಂದು ಮಹಿಳೆಯ ಸಹೋದರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...