ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡಲು ತಡೆ; 6 ಮಂದಿಗೆ ಜೈಲು ಶಿಕ್ಷೆ

Date:

ಶಾಲೆಯಲ್ಲಿ ಬಿಸಿಯೂಟ ಕಾರ್ಮಿಕಳಾಗಿ ನೇಮಕಗೊಂಡಿದ್ದ ದಲಿತ ಮಹಿಳೆಗೆ ಅಡುಗೆ ತಯಾರಿಸದಂತೆ ಅಡ್ಡಿಪಡಿಸಿದ್ದ ಪ್ರಕರಣದಲ್ಲಿ ಆರು ಮಂದಿ ಅಪರಾಧಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.

2018ರಲ್ಲಿ ತಮಿಳುನಾಡಿನ ತಿರುಪ್ಪೂರ್ ಪ್ರದೇಶದ ತಿರುಮಲೈಗೌಂಡಂಪಾಳ್ಯಂ ಸರ್ಕಾರಿ ಶಾಲೆಯಲ್ಲಿ ಪ್ರಕರಣ ನಡೆದಿತ್ತು. ಆ ಸಮಯದಲ್ಲಿ, ಗ್ರಾಮದ ಪ್ರಬಲ ಸಮುದಾಯಕ್ಕೆ ಸೇರಿದ ಪಿ.ಪಳನಿಸ್ವಾಮಿ ಗೌಂಡರ್, ಎನ್.ಶಕ್ತಿವೇಲ್, ಆರ್.ಷಣ್ಮುಗಂ, ಸಿ.ವೆಲ್ಲಿಂಗಿರಿ, ಎ.ದುರೈಸ್ವಾಮಿ ಹಾಗೂ ವಿ.ಸೀತಾಲಕ್ಷ್ಮಿ ಮತ್ತು ಇತರರು ದಲಿತ ಮಹಿಳೆ ಶಾಲೆಯಲ್ಲಿ ಅಡುಗೆ ಮಾಡದಂತೆ ದಾಂಧಲೆ ನಡೆಸಿ, ಅಡ್ಡಿ ಮಾಡಿದ್ದರು.

ಈ ಆರು ಮಂದಿ ಸೇರಿದಂತೆ 35 ಮಂದಿ ವಿರುದ್ಧ ಜಾತಿ ತಾರತಮ್ಯ ಆರೋಪದ ಮೇಲೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಸರ್ಕಾರಿ ಶಾಲೆಯಲ್ಲಿ ಸೇವೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್‌ಗಳನ್ನೂ ಸೇರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಸುರೇಶ್, ಈ ಆರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದಾರೆ. ಆರು ಮಂದಿಗೂ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 5,000 ರೂ. ದಂಡ ವಿಧಿಸಿದ್ದಾರೆ.

ಅಲ್ಲದೆ, ಸಾಕ್ಷ್ಯಾಧಾರದ ಕೊರತೆಯಿಂದ 25 ಮಂದಿಯನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನುಳಿದ ನಾಲ್ವರು ಆರೋಪಿಗಳು ವಿಚಾರಣಾ ಅವಧಿಯ ನಡುವೆಯೇ ಮೃತಪಟ್ಟಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...