ಬೋರ್‌ವೆಲ್ ನೀರು ಬಳಸಿದ್ದಕ್ಕೆ ದಲಿತ ಯುವಕನಿಗೆ ಥಳಿಸಿ ಕೊಂದ ದುಷ್ಕರ್ಮಿಗಳು

Date:

ಬೋರ್‌ವೆಲ್‌ ನೀರು ಬಳಸಿದ್ದಕ್ಕೆ ದಲಿತ ಯುವಕನಿಗೆ ಗ್ರಾಮದ ಸರಪಂಚ್ ಮತ್ತು ಸರಪಂಚ್‌ನ ಪತ್ನಿ ಸೇರಿದಂತೆ ಕನಿಷ್ಠ ಐವರು ಥಳಿಸಿ ಕೊಂದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ.

ಗ್ವಾಲಿಯರ್ ಜಿಲ್ಲೆಯ 27 ವರ್ಷದ ನಾರದ್ ಜಾತವ್ ಎಂಬ ದಲಿತ ಯುವಕನು ಇಂದರ್‌ಗಢ ಗ್ರಾಮದಲ್ಲಿ ಮಂಗಳವಾರ ತನ್ನ ತಾಯಿಯ ಚಿಕ್ಕಪ್ಪನ ಹೊಲಗಳಿಗೆ ಬೋರ್‌ವೆಲ್‌ ನೀರನ್ನು ಹಾಕುತ್ತಿದ್ದನು. ಈ ವೇಳೆ ಗ್ರಾಮದ ಸರಪಂಚ್ ಪದಮ್ ಸಿಂಗ್ ಧಕಡ್, ಸರಪಂಚ್‌ನ ಪತ್ನಿ ದಾಖಾ ಬಾಯಿ ಮತ್ತು ಅವರ ಸಹಾಯಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವಪುರಿ ಜಿಲ್ಲಾ ಪೊಲೀಸರ ಪ್ರಕಾರ ಬೋರ್‌ವೆಲ್‌ ನೀರು ಬಳಸುವ ವಿಚಾರದಲ್ಲಿ ಒಬಿಸಿ ಧಕಡ್ ಜಾತಿ ಮತ್ತು ಎಸ್‌ಸಿ ಜಾತವ್ ಜಾತಿಯ ನಡುವೆ ಹಲವು ವರ್ಷಗಳಿಂದ ವಾಗ್ವಾದಗಳು ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? BIG BREAKING | ತುಮಕೂರು ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ಕ್ರೂರ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಂಪೊಂದು ನಾರದ್ ಜಾತವ್ ಮೇಲೆ ಕೋಲುಗಳು ಮತ್ತು ರಬ್ಬರ್ ಪೈಪ್‌ಗಳಿಂದ ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದು ಕಾಣಬಹುದು. ಈ ವೇಳೆ ಮಹಿಳೆಯರು ಸೇರಿದಂತೆ ಹಲವು ಮಂದಿ ನಿಂತು ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸದ್ಯ ಎಂಟು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಗ್ರಾಮದ ಸರಪಂಚ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಇನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾಗೆಯೇ ಮೃತ ನಾರದ ಜಾತವ್ ಅವರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...