ದಲ್ಲೇವಾಲ್ ಅನಿರ್ದಿಷ್ಟಾವಧಿ ಉಪವಾಸ ಅಂತ್ಯಗೊಳಿಸಿಲ್ಲ: ರೈತ ನಾಯಕ ಅಭಿಮನ್ಯು

Date:

ಕಳೆದ ವಾರ ರಾಜ್ಯ ಪೊಲೀಸರು ಬಂಧಿಸಿದ್ದ ರೈತರನ್ನು ವಿವಿಧ ಜೈಲುಗಳಿಂದ ಬಿಡುಗಡೆ ಮಾಡಿದ ನಂತರ ಪಂಜಾಬ್ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಒಂದು ಲೋಟ ನೀರು ಕುಡಿದಿದ್ದಾರೆ. ಆದರೆ ಇನ್ನೂ ಕೂಡಾ ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಅಂತ್ಯಗೊಳಿಸಿಲ್ಲ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಶನಿವಾರ ಹೇಳಿದ್ದಾರೆ.

ದಲ್ಲೇವಾಲ್ ನೀರು ಕುಡಿದು ಉಪವಾಸ ಅಂತ್ಯಗೊಳಿಸಿದ್ದಾರೆ ಎಂದು ಪಂಜಾಬ್ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪಂಜಾಬ್ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರೈತ ನಾಯಕ ಅಭಿಮನ್ಯು, “ದಲ್ಲೇವಾಲ್ ಉಪವಾಸ ಅಂತ್ಯಗೊಳಿಸಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ರೈತರ ಬೇಡಿಕೆಗಳು ಈಡೇರುವವರೆಗೆ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೇವಾಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲಾ ರೈತರ ಬಿಡುಗಡೆಯ ನಂತರವೇ ತಾನು ನೀರು ಕುಡಿಯುವುದಾಗಿ ದಲ್ಲೇವಾಲ್ ಹೇಳಿದ್ದರು. ಅದರಂತೆ ರೈತ ನಾಯಕರನ್ನು ಬಿಡುಗಡೆ ಮಾಡಿದ ನಂತರ ದಲ್ಲೇವಾಲ್ ಒಂದು ಲೋಟ ನೀರು ಕುಡಿದಿದ್ದಾರೆ. ಆದರೆ ದಲ್ಲೇವಾಲ್ ತಮ್ಮ ಉಪವಾಸ ಅಂತ್ಯಗೊಳಿಸಿದ್ದಾರೆ ಎಂದು ತಪ್ಪು ಮಾಹಿತಿಯನ್ನು ಹರಡಲಾಗಿದೆ. ಈ ಬಗ್ಗೆ ನಾವು ಸ್ಪಷ್ಟಣೆ ನೀಡಲು ಬಯಸುತ್ತೇವೆ. ದಲ್ಲೇವಾಲ್ ಅವರು ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಮಾರ್ಚ್ 19ರಂದು ಹರಿಯಾಣದ ಖಾನೌರಿ ಮತ್ತು ಶಂಭು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬಂಧಿಸಲಾಗಿದೆ. ಈ ಬೆನ್ನಲ್ಲೇ ದಲ್ಲೇವಾಲ್ ರೈತರ ಬಿಡುಗಡೆಯಾಗುವವರೆಗೂ ನೀರು ಕುಡಿಯುವುದಿಲ್ಲ ಎಂದು ಹೇಳಿದ್ದರು. ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 70 ವರ್ಷದ ದಲ್ಲೇವಾಲ್ ಹಲವು ತಿಂಗಳುಗಳಿಂದ ಉಪವಾಸ ನಡೆಸುತ್ತಿದ್ದಾರೆ. ಆರಂಭದಲ್ಲಿ ವೈದ್ಯಕೀಯ ನೆರವು ನಿರಾಕರಿಸಿದ್ದ ದಲ್ಲೇವಾಲ್ ಇದೀಗ ನೆರವು ಪಡೆಯುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...