ವಿಚಿತ್ರ-ವಿಕೃತ ಘಟನೆ: ವರದಕ್ಷಿಣೆಯಾಗಿ ‘ಕಿಡ್ನಿ’ ಕೊಡುವಂತೆ ಸೊಸೆಗೆ ಅತ್ತೆ-ಮಾವ ಕಿರುಕುಳ

Date:

ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ಕಿರುಕುಳದಂತಹ ಗಂಭೀರ ಸಮಸ್ಯೆಗಳು ಇನ್ನೂ ಕೊನೆಗೊಂಡಿಲ್ಲ. ವರದಕ್ಷಿಣೆ ಕೊಡುವುದು-ಪಡೆಯುವುದು ಕಾನೂನುಬಾಹಿರವಾಗಿದ್ದರೂ, ವರದಕ್ಷಿಣೆ ಪದ್ದತಿಯು ನಿರಂತರವಾಗಿ ಮುಂದುವರೆದಿದೆ. ಅದರಲ್ಲೂ, ವರದಕ್ಷಿಣೆಗಾಗಿ ‘ಕಿಡ್ನಿ’ ಕೊಡುವಂತೆ ಸೊಸೆಗೆ ಅತ್ತೆ-ಮಾವ ಕಿರುಕುಳ ನೀಡಿರುವ ವಿಕೃತ ಘಟನೆ ಬಿಹಾರದಲ್ಲಿ ನಡೆದಿದೆ.

ವರದಕ್ಷಿಣೆಯಾಗಿ ತಮ್ಮ ಮಗನಿಗೆ ತವರು ಮನೆಯಿಂದ ಬೈಕ್, ಚಿನ್ನದ ಆಭರಣೆ ಹಾಗೂ ನಗದು ತಂದುಕೊಡಬೇಕು. ಇಲ್ಲವಾದಲ್ಲಿ, ನಿನ್ನ ಕಿಡ್ನಿಯನ್ನೇ ಕೊಡಬೇಕೆಂದು ಮಹಿಳೆಯೊಬ್ಬರಿಗೆ ಆಕೆಯ ಅತ್ತೆ-ಮಾವ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿಹಾರದ ಮುಜಫರ್‌ಪುರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಜಫರ್‌ಪುರದ ದೀಪ್ತಿ ಎಂಬವರು ತಮ್ಮ ಅತ್ತೆ-ಮಾವನ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ; ” 2021ರಲ್ಲಿ ನನ್ನ ವಿವಾಹವಾಗಿತ್ತು. ಆರಂಭದಲ್ಲಿ ಗಂಡನ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ, ಕಾಲಾನಂತರದಲ್ಲಿ ಅತ್ತೆ-ಮಾವ ಕಿರುಕುಳ ನೀಡಲು ಆರಂಭಿಸಿದರು. ವರದಕ್ಷಿಣೆಯಾಗಿ ಬೈಕ್, ನಗದು ಮತ್ತು ಆಭರಣಗಳನ್ನು ತವರು ಮನೆಯಿಂದ ತರಬೇಕೆಂದು ಮಾನಸಿಕವಾಗಿ, ದೈಹಿಕವಾಗಿ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತನ್ನ ತಂದೆಯ ಮನೆಯಿಂದ ವರದಕ್ಷಿಣೆ ತರಲು ಸಾಧ್ಯವಿಲ್ಲವೆಂದು ಹೇಳಿದ್ದಕ್ಕೆ, ನನ್ನ ಅನಾರೋಗ್ಯ ಪೀಡಿತ ಪತಿಗೆ ನನ್ನ ಕಿಡ್ನಿಗಳನ್ನು ಒಂದನ್ನು ದಾನ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆತನಿಗೆ ಮದುವೆಗೂ ಮುನ್ನವೆ ಕಿಡ್ನಿ ಸಮಸ್ಯೆಯಿತ್ತು. ಆದರೆ, ಅದನ್ನು ಮುಚ್ಚಿಟ್ಟು ಮದುವೆ ಮಾಡಿಸಿದ್ದಾರೆ. ಈಗ, ಕಿಡ್ನಿ ಕೊಡಬೇಕೆಂದು ಹೊಡೆದು, ಬಡಿದು ಪೀಡಿಸುತ್ತಿದ್ದಾರೆ” ಎಂದು ದೀಪ್ತಿ ಆರೋಪಿಸಿದ್ದಾರೆ.

ದೀಪ್ತಿ ಅವರ ದೂರಿನ ಆಧಾರದ ಮೇಲೆ ಪೊಲೀಸರು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...