ನಾನು ಭಾರತದ ಸೊಸೆ, ನಾನಿಲ್ಲೇ ಇರುತ್ತೇನೆ: ಸೀಮಾ‌ ಹೈದರ್

Date:

ಭಾರತವನ್ನು ತೊರೆಯುವಂತೆ ಪಾಕಿಸ್ತಾನದ ಪ್ರಜೆಗಳಿಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವು ಇಂದಿಗೆ (ಏಪ್ರಿಲ್ 27) ಮುಗಿಯಲಿದೆ. ಹಲವಾರು ಪಾಕ್ ಪ್ರಜೆಗಳು ಪಾಕಿಸ್ತಾನಕ್ಕೆ ಮರಳಲಾಗದೆ ಪರಿತಪಿಸುತ್ತಿದ್ದಾರೆ. ಅವರಲ್ಲಿ ಹಲವರು ಹಿಂದುಗಳೂ ಇದ್ದಾರೆ.

ಈಗ, ಪಾಕಿಸ್ತಾನಕ್ಕೆ ವಾಪಸ್ ಹೋಗಲು ಮನಸ್ಸಿಲ್ಲದೆ, ಕಂಗಾಲಾಗಿರುವವರಲ್ಲಿ, ಪಾಕಿಸ್ತಾನದಲ್ಲಿ ಹುಟ್ಟಿ, ಭಾರತದ ಸೊಸೆಯಾಗಿರುವ ಸೀಮಾ ಹೈದರ್ ಕೂಡ ಒಬ್ಬರು.

2023ರಲ್ಲಿ ಪ್ರೀತಿ ಅರಸಿ ಪಾಕಿಸ್ತಾನ ತೊರೆದು ಭಾರತಕ್ಕೆ ಬಂದ ಸೀಮಾ ಅವರು, ಉತ್ತರ ಪ್ರದೇಶದ ಸಚಿನ್ ಮೀನಾ ಎಂಬವರನ್ನು‌ ವಿವಾಹವಾಹಿದ್ದರು. ಒಂದು ಮಗುವಿಗೂ ಜನ್ಮ ನೀಡಿದ್ದಾರೆ. ಆದರೆ, ಇದೀಗ ಅವರನ್ನು ಪಾಕಿಸ್ತಾನಕ್ಕೆ ವಾಪಸ್ ಹೋಗುವಂತೆ ಸೂಚನೆ ನೀಡಲಾಗಿದೆ. ಅವರು ಭಾರತವನ್ನು ತೊರೆಯುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಭಾರತದ ಸೊಸೆ. ನನ್ನ ಪತಿ, ಮಗು ಭಾರತದಲ್ಲಿಯೇ ಇದ್ದಾರೆ. ನಾನು ಭಾರತವನ್ನು ತೊರೆಯುವುದಿಲ್ಲ” ಎಂದು ಸೀಮಾ ಹೇಳಿದ್ದಾರೆ.

ಈ ಬಗ್ಗೆ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸೀಮಾ, “ದಯವಿಟ್ಟು ನನ್ನನ್ನು ಇಲ್ಲಿಯೇ ಇರಲು ಬಿಡಿ. ನಾನು ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದೇನೆ. ನಾನು ಇಲ್ಲಿಯೇ ಇರುತ್ತೇನೆ” ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ ಮನವಿ ಮಾಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಕಾರಣವೆಂದು ಭಾರತ ಆರೋಪಿಸಿದೆ. ಪ್ರತಿಕಾರವಾಗಿ ಪಾಕಿಸ್ತಾನದ ಪ್ರಜೆಗಳಿಗೆ ಭಾರತ ತೊರೆಯುವಂತೆ ಕೇಂದ್ರ ಸರ್ಕರ ನಿರ್ದೇಶಿಸಿದೆ. ಪಾಕ್ ಪ್ರಜೆಗಳು ತಮ್ಮ ವೀಸಾಗಳನ್ನು ಏಪ್ರಿಲ್ 17ರ ಒಳಗೆ ಸರ್ಕಾರಕ್ಕೆ ವಾಪಸ್ ಕೊಡುವಂತೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...