ದಾವಣಗೆರೆ | ಜಿಂದಾಲ್-ಪೋಸ್ಕೊ ವಿರೋಧಿ ಎಸ್ ಕೆ ಎಂ ನಾಯಕರ ಬಂಧನ ಖಂಡಿಸಿ ಪ್ರತಿಭಟನೆ

Date:

ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಮತ್ತು ನಮ್ಮ ಸಂಘಟನೆಯ ಅಧ್ಯಕ್ಷ ಸತ್ಯವಾನ್ ಮತ್ತು ಎಐಕೆಕೆಎಂಎಸ್ ನ ಒಡಿಶಾ ರಾಜ್ಯ ಅಧ್ಯಕ್ಷ ಸದಾಶಿವ್ ದಾಸ್ ಮತ್ತು ಇತರ ಮುಖಂಡರುಗಳನ್ನು ಜಿಂದಾಲ್-ಪೋಸ್ಕೊ ಕಂಪನಿಯ ಗೂಂಡಾಗಳು ಅಪಹರಿಸಿ ಹಿಂಸಿಸಿದ್ದು, ತರುವಾಯ ಒಡಿಶಾದ ಕಿಯೋಂಝಾರ್ ಜಿಲ್ಲೆಯ ತುರುಮುಂಗಾ ಪೊಲೀಸ್ ಠಾಣೆಯಲ್ಲಿ ಬಂಧಿಸಿರುವ ಕ್ರಮವನ್ನು ಖಂಡಿಸಿ ಎಐಕೆಕೆಎಂಎಸ್ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಮಾಯಕೊಂಡ ಗ್ರಾಮದಲ್ಲಿ ಅಖಿಲ ಭಾರತ ಪ್ರತಿರೋಧ ಪ್ರತಿಭಟನೆಯನ್ನು ನಡೆಸಲಾಯಿತು.

1003281786

ಪ್ರತಿಭಟನೆಯನ್ನು ಉದ್ದೇಶಿಸಿ ಎಐಕೆಕೆಎಂಎಸ್ (AIKKMS) ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಟಿ ಎ ಸುನಿಲ್ ಕುಮಾರ್ ಮಾತನಾಡಿ, “ಒಡಿಶಾದ ಕಿಯೋಂಝಾರ್ ಜಿಲ್ಲೆಯ ಜಮುನಾಪೋಸಿ ಗ್ರಾಮದಲ್ಲಿ ಜಿಂದಾಲ್ ಪೋಸ್ಕೊ ವಿರೋಧಿ ಮಂಚ್ ಆಯೋಜಿಸಿದ್ದ ಸಭೆಯಿಂದ ಹಿಂತಿರುಗುತ್ತಿದ್ದಾಗ ಕಂಪನಿಯ ಗೂಂಡಾಗಳು ಅಪಹರಿಸಿದ ಘಟನೆ ಸಂಭವಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜಿಂದಾಲ್ ಮತ್ತು ಪೋಸ್ಕೊದಂತಹ ಬಹುರಾಷ್ಟ್ರೀಯ ಕಂಪನಿಗಳು ಬಡ ರೈತರಿಂದ ಕೃಷಿ ಭೂಮಿಯನ್ನು ಕಸಿದುಕೊಳ್ಳಲು ಸಹಾಯ ಮಾಡಲು ಸ್ಥಳೀಯ ಪೊಲೀಸ್ ಆಡಳಿತವು ಈ ಹೇಯ ಕೃತ್ಯವನ್ನು ನಡೆಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003281785

“ಆಡಳಿತ ಗುಂಪಿನ ಈ ಜನವಿರೋಧಿ, ರೈತವಿರೋಧಿ ನಡೆಯನ್ನು ಎಐಕೆಕೆಎಂಎಸ್ ಬಲವಾಗಿ ಖಂಡಿಸುತ್ತದೆ. ಮತ್ತು ಸತ್ಯವಾನ್ ಮತ್ತು ಸಂಘಟನೆಯ ಇತರ ನಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು” ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಸ್ಐಆರ್ ಎಂದರೆ ಎನ್ಆರ್ಸಿ, ಮತದಾನ ಹಕ್ಕುಗಳ ಪೌರತ್ವ ನಿರಾಕರಣೆ: ಚಿಂತಕ ಶಿವಸುಂದರ್

ಪ್ರತಿಭಟನೆಯಲ್ಲಿ ಎಐಕೆಕೆಎಂಎಸ್ ಜಿಲ್ಲಾಧ್ಯಕ್ಷರಾದ ಮಧು ತೊಗಲೇರಿ, ಜಿಲ್ಲಾ ಉಪಾಧ್ಯಕ್ಷರಾದ ಭೀಮಣ್ಣ, ಮಾಯಕೊಂಡ ರಾಜು, ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಮುಖಂಡರಾದ ಅಶೋಕ್ ಗೌಡ, ಪ್ರತಾಪ್ ಜೋಗಿ, ಭೀಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...