ದಾವಣಗೆರೆ | ಸದೃಢ ಅರ್ಥವ್ಯವಸ್ಥೆ ಹಾಗೂ ದೇಶವನ್ನು ಮುನ್ನಡೆಸಲು ಗಣಿತ ಅಗತ್ಯ: ನ್ಯಾ. ಮಹಾವೀರ ಕರೆಣ್ಣನವರ

Date:

“ವ್ಯವಹಾರ, ವಿದ್ಯಾಭ್ಯಾಸ, ಕಟ್ಟಡ ನಿರ್ಮಾಣ, ಕ್ರೀಡೆ ಹಾಗೂ ವೈಯಕ್ತಿಕ ಬೆಳವಣಿಗೆಗೆ ಗಣಿತ ಅತಿ ಅಗತ್ಯ. ಜೀವನ ನಿರ್ವಹಿಸಲು, ಕುಟುಂಬವನ್ನು ನಡೆಸಲು ಅಥವಾ ದೇಶವನ್ನು ಮುನ್ನಡೆಸಲು ಸರಿಯಾದ ‘ಲೆಕ್ಕಾಚಾರ’ ಇರಲೇಬೇಕು. ಆಗ ಮಾತ್ರ ಸುಗಮ ಜೀವನ ಮತ್ತು ಸದೃಢ ಅರ್ಥವ್ಯವಸ್ಥೆ ಸಾಧ್ಯ” ಎಂದು ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಎಂ. ಕರೆಣ್ಣನವರ ಮಕ್ಕಳಿಗೆ ಸಲಹೆ ನೀಡಿದರು.

1003546632
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ನ್ಯಾ. ಮಹಾವೀರ ಕರೆಣ್ಣನವರ

​ದಾವಣಗೆರೆ ನಗರದ ಪ್ರತಿಷ್ಠಿತ ಅಮೃತ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಲ್ಲಿ ಗಣಿತದ ಬಗ್ಗೆ ಆಸಕ್ತಿ ಮೂಡಿಸುವ ಮತ್ತು ಅವರ ತಾರ್ಕಿಕ ಚಿಂತನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಿದ್ದ ಗಣಿತ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, “ಗಣಿತವು ಕೇವಲ ಪಠ್ಯಕ್ಕೆ ಸೀಮಿತವಲ್ಲ, ಅದು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಹಾಸುಹೊಕ್ಕಾಗಿದೆ. ವಿದ್ಯಾರ್ಥಿಗಳು ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಗಣಿತದ ಮಹತ್ವವನ್ನು ಅರಿತುಕೊಳ್ಳಬೇಕು” ಎಂದು ಕರೆ ನೀಡಿದರು.

1003546631

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಪ್ರತಿಭಾ ಎನ್. ಮಾತನಾಡಿ “ಗಣಿತ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ದೃಷ್ಟಿಕೋನ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ಯಶಸ್ವಿಯಾಗಲಿದೆ” ಎಂದು ಅಭಿಪ್ರಾಯಪಟ್ಟರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003546618 1

​ಅಮೃತ ವಿದ್ಯಾಲಯದ ಆಯೋಜಿಸಿರುವ ಗಣಿತ ಪ್ರದರ್ಶನವನ್ನು ವಿದ್ಯಾರ್ಥಿಗಳಲ್ಲಿ ಗಣಿತದ ಬಗ್ಗೆ ಆಸಕ್ತಿ ಮೂಡಿಸುವ ಮತ್ತು ಅವರ ತಾರ್ಕಿಕ ಚಿಂತನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ​ಪ್ರದರ್ಶನದಲ್ಲಿ ಶಾಲೆಯ 1500 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಸಿದ್ಧಪಡಿಸಿದ ಗಣಿತದ ವಿವಿಧ ಮಾದರಿಗಳು, ರೇಖಾಗಣಿತದ ವಿನ್ಯಾಸಗಳು ಮತ್ತು ತಾರ್ಕಿಕ ಆಟಗಳು ನೆರೆದಿದ್ದವರ ಗಮನ ಸೆಳೆದವು. ಮಕ್ಕಳ ಜ್ಞಾನ ಮತ್ತು ಸೃಜನಶೀಲತೆ ಅತಿಥಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಮದ್ಯ ಜೂಜು ಮಟ್ಕಾ ನಿಯಂತ್ರಣಕ್ಕೆ ಎಸ್ಸಿಎಸ್ಟಿಕುಂದುಕೊರತೆ ಸಭೆಯಲ್ಲಿ ಆಗ್ರಹ

ವಿಶೇಷ ಅತಿಥಿಗಳಾಗಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಎನ್.ಸಿ. ವಿವೇಕ್ ಹಾಗೂ ಶಾಲೆಯ ಉಪಪ್ರಾಂಶುಪಾಲರಾದ ಪ್ರಥೀಕ್ ಎಚ್.ಎಸ್. ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.
ಅಮೃತ ವಿದ್ಯಾಲಯದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...