ದಾವಣಗೆರೆ | ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ: ಜೆಸಿಟಿಯು ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

Date:

ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವರು ಇತ್ತೀಚೆಗೆ ಹೇಳಿದ್ದಾರೆ. ಇದು ಈ ದೇಶದ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಗೆ, ಜನಸಾಮಾನ್ಯರಿಗೆ ಆಘಾತವನ್ನುಂಟು ಮಾಡಿದೆ. ಏಕೆಂದರೆ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗಿಯವರಿಗೆ ಮಾರುವುದರಿಂದ ದೇಶದ ಆರ್ಥಿಕ ವ್ಯವಸ್ಥೆಯ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟಾಗಲಿದೆ. ಜೊತೆಗೆ ಲಕ್ಷಾಂತರ ಕೋಟಿಯ ಪ್ರಮಾಣದಲ್ಲಿರುವ ಜನತೆಯ ಠೇವಣಿ ಹಣದ ಭದ್ರತೆಯ ಕುರಿತಾಗಿ ಠೇವಣಿದಾರರಿಗೆ ಅಭದ್ರತೆ ಮತ್ತು ಆತಂಕದ ವಾತಾವರಣ ಸೃಷ್ಠಿಯಾಗಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿ ಜೆಸಿಟಿಯು ಹಾಗೂ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ದಾವಣಗೆರೆ ನಗರದ ಮಂಡಿಪೇಟೆಯ ಎಸ್.ಬಿ.ಐ. ಬ್ಯಾಂಕ್ ಮುಂಬಾಗ ಪ್ರತಿಭಟನೆ ನಡೆಸಿದರು.

“1969ರವರೆಗೆ ಖಾಸಗಿ ವಲಯದಲ್ಲಿದ್ದ ಬ್ಯಾಂಕುಗಳ ಮಾಲೀಕರು ದೇಶದ ಆರ್ಥಿಕ ಬೆಳವಣಿಗೆಯ ಕುರಿತಾಗಿ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿರಲಿಲ್ಲ. ಈ ಬಂಡವಾಳವಾಹಿಗಳು ತಮ್ಮ ಕೈಗಾರಿಕೆಗಳ ಅಗತ್ಯಗಳಿಗೆ ಮತ್ತು ತಮಗೆ ಬೇಕಾದವರಿಗೆ ಮಾತ್ರ ಬ್ಯಾಂಕುಗಳಲ್ಲಿದ್ದ ಜನರ ಠೇವಣಿ ಹಣವನ್ನು ಬಳಸುತ್ತಿದ್ದರು. ಬ್ಯಾಂಕುಗಳಲ್ಲಿರುವ ಆಗಾಧ ಪ್ರಮಾಣದ ಠೇವಣಿ ಹಣ ಜನಸಾಮಾನ್ಯರಿಗೆ ಸೇರಿರುವಂತದ್ದು. ಈ ಠೇವಣಿ ಹಣದ ಮುಖಾಂತರ ಬ್ಯಾಂಕುಗಳು ಗಳಿಸುವ ಲಾಭದ ಹಣವನ್ನು ಈ ದೇಶದ ಜನಸಾಮಾನ್ಯರ ಅಭ್ಯುದಯಕ್ಕಾಗಿ ವಿನಿಯೋಗಿಸಬೇಕೇ ಹೊರತು ಖಾಸಗಿ ವ್ಯಕ್ತಿಗಳ ಲೂಟಿಗಾಗಿ ಅಲ್ಲ. ಇದರಿಂದಾಗಿಯೇ 1969 ಮತ್ತು 1980ರಲ್ಲಿ ಎರಡು ಹಂತಗಳಲ್ಲಿ ಖಾಸಗಿ ವ್ಯಕ್ತಿಗಳ ಹಾಗೂ ಸಂಸ್ಥೆಗಳ ಬಿಗಿ ಮುಷ್ಠಿಯಲ್ಲಿದ್ದ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಲಾಯಿತು” ಎಂದು ಅಭಿಪ್ರಾಯಪಟ್ಟರು.

1003162628
Oplus_131072

“ರಾಷ್ಟ್ರೀಕರಣವಾದ ನಂತರದಲ್ಲಿ ಬ್ಯಾಂಕುಗಳು ಅಭೂತಪೂರ್ವವಾಗಿ ಬೆಳವಣಿಗೆಯನ್ನು ಕಂಡಿವೆ. ಜೊತೆಗೆ ದೇಶದ ಆರ್ಥಿಕ ಬೆಳವಣಿಗೆಗೆ, ಜನರ ಆರ್ಥಿಕ ಸ್ವಾವಲಂಬನೆಗೆ ಕಾರಣೀಭೂತವಾಗಿದೆ. ಪ್ರಸ್ತುತ ಬ್ಯಾಂಕುಗಳಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಠೇವಣಿ ಹಣವಿದೆ. ಈ ಠೇವಣಿ ಹಣವನ್ನು ನಮ್ಮ ದೇಶದ ಕೈಗಾರಿಕೋಧ್ಯಮದ ಬೆಳವಣಿಗೆಗೆ, ಸಾರಿಗೆ-ಸಂಪರ್ಕದ ಸ್ಥಾಪನೆಗೆ, ಕೃಷಿ-ನೀರಾವರಿ, ಸಣ್ಣ-ಮದ್ಯಮ ಗಾತ್ರದ ಕೈಗಾರಿಕೆಗಳ ಬೆಳವಣಿಗೆಗೆ, ಶಿಕ್ಷಣ ಪಡೆಯಲು ಮತ್ತು ಜನಸಾಮಾನ್ಯರು ಸ್ವ ಉದ್ಯೋಗ ಕಲ್ಪಿಸಿಕೊಳ್ಳುವಂತಹ ಮಹತ್ಕಾರ್ಯಗಳಿಗೆ ಬಳಸಲಾಗುತ್ತಿದೆ. ಒಟ್ಟಾರೆಯಾಗಿ ಹೇಳುವುದಾದರೆ ನಮ್ಮ ದೇಶದ ಆರ್ಥಿಕ ಬೆಳವಣಿಗೆಗೆ ಜೀವನಾಡಿಯಂತೆ ರಾಷ್ಟ್ರೀಕೃತ ಬ್ಯಾಂಕುಗಳು ಕಾರ್ಯ ನಿರ್ವಹಿಸುತ್ತಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

*ರಾಷ್ಟ್ರೀಕೃತ ಬ್ಯಾಂಕುಗಳು ದೇಶದ ಆರ್ಥಿಕ ಒಳಗೊಳ್ಳುವಿಕೆ ಪ್ರಕ್ರಿಯೆಗೆ ಬೆನ್ನೆಲುಬಾಗಿ ಕೆಲಸ ಮಾಡುತ್ತಿವೆ. ಜೊತೆಗೆ ಜನಧನ್, ನರೇಗಾ, ಪಿಂಚಣಿ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಫಲ ಸಾರ್ವಜನಿಕರಿಗೆ ತಲುಪುತ್ತಿರುವುದು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಂದಲೇ ಹೊರತು ಖಾಸಗಿ ಬ್ಯಾಂಕ್‌ಗಳಿಂದ ಅಲ್ಲ ಎನ್ನುವುದನ್ನು ಸರಕಾರ ಅರ್ಥೈಸಿಕೊಳ್ಳಬೇಕು” ಎಂದು ಕಿಡಿಕಾರಿದರು.

“ಖಾಸಗೀಕರಣದಿಂದ ಬ್ಯಾಂಕ್ ನೌಕರರ ಉದ್ಯೋಗಕ್ಕೆ ಅಭದ್ರತೆ ಮತ್ತು ಸಾರ್ವಜನಿಕರ ಠೇವಣಿ ಹಣಕ್ಕೆ ಅಪಾಯ ಉಂಟಾಗುವುದು ನಿಶ್ಚಿತ. ಖಾಸಗೀಕರಣದಿಂದ ಕಾರ್ಪೊರೇಟ್ ಕಂಪನಿಗಳಿಗೆ ಲಾಭವಾಗಲಿದೆಯೇ ಹೊರತು ಸಾರ್ವಜನಿಕರಿಗೆ ಅಲ್ಲ. ಖಾಸಗೀಕರಣದಿಂದ ಜನರ ಹಣ ಖಾಸಗಿಯವರ ನಿಯಂತ್ರಣಕ್ಕೆ ಸೇರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದು ನಮ್ಮ ಕಾರ್ಮಿಕ/ರೈತ ಸಂಘಟನೆಗಳ ಪ್ರಶ್ನೆಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಕೇಂದ್ರ ಸರಕಾರ ತಮ್ಮ ಉದ್ದೇಶಗಳ ಈಡೇರಿಕೆಗಾಗಿ ದೇಶದ ಸಾರ್ವಜನಿಕ ಕ್ಷೇತ್ರದಲ್ಲಿ ಬ್ಯಾಂಕುಗಳನ್ನು ಮಾರಲು ಹುನ್ನಾರ ನಡೆಸಿವೆ. ಸರಕಾರಕ್ಕೆ ಖಾಸಗಿಯವರಿಗೆ ಮಾರಲು ಯಾವುದೇ ನೈತಿಕ ಹಕ್ಕಿಲ್ಲ. ಈ ಬ್ಯಾಂಕುಗಳು ದೇಶದ ಜನಸಾಮಾನ್ಯರ ಶ್ರಮದಿಂದ, ಬೆವರಿನ ಪ್ರತಿಫಲವಾಗಿ ಸ್ಥಾಪನೆಯಾಗಿವೆ. ಮತ್ತು ಬೆಳವಣಿಗೆಯನ್ನು ಕಂಡಿವೆ. ಆದ್ದರಿಂದ ಈ ರಾಷ್ಟ್ರೀಕೃತ ಬ್ಯಾಂಕುಗಳನ್ನು ಉಳಿಸಲು ಹೋರಾಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಜವಾಬ್ದಾರಿಯಾಗಿದೆ” ಎಂದು ತಿಳಿಸಿದರು.‌

“ಈ ಪ್ರಮುಖ ಬೇಡಿಕೆಗಳಾದ ‘ಈಗಿನ ರಾಷ್ಟ್ರೀಕೃತ ಬ್ಯಾಂಕುಗಳನ್ನು ಸಬಲಗೊಳಿಸಿ ಜೊತೆಗೆ ಎಲ್ಲಾ ಖಾಸಗೀ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವ ಮೂಲಕ ಅವುಗಳನ್ನು ಸರಕಾರ ತನ್ನ ಅಧೀನಕ್ಕೆ ತೆಗೆದುಕೊಳ್ಳಬೇಕು. ರಾಷ್ಟ್ರೀಕೃತ ಬ್ಯಾಂಕಿಂಗ್ ಸೇವೆಯು ದೇಶದ ಮೂಲೆ ಮೂಲೆಗೆ ತಲುಪಿಸಬೇಕು. ಖಾಸಗೀಕರಣದಿಂದ ಜನಸಾಮಾನ್ಯರ ಕೋಟ್ಯಾಂತರ ಠೇವಣಿ ಹಣಕ್ಕೆ ಅಪಾಯ. ಹಾಗಾಗಿ ಸಾರ್ವಜನಿಕ ಬ್ಯಾಂಕುಗಳು ಸರಕಾರದ ಅಧೀನದಲ್ಲಿರಬೇಕು”.

“ಸಾರ್ವಜನಿಕ ಬ್ಯಾಂಕುಗಳ ಲಾಭವನ್ನು ಜನರ ಅಭ್ಯುದಯಕ್ಕೆ ಬಳಸಲಾಗಬೇಕು, ಸಾಲ ವಸೂಲಿ ಪರಿಣಾಮಕಾರಿಯಾಗಲು ಕಠಿಣ ಕಾನೂನು ರೂಪಿಸಿ ಉದ್ದೇಶಪೂರ್ವಕವಾಗಿ ಸಾಲ ತೀರಿಸದ ಬಂಡವಾಳಶಾಹಿಗಳ ಮೇಲೆ ಕ್ರಿಮಿನಲ್ ಕ್ರಮ ಕೈಗೊಂಡು ಅವರ ಆಸ್ತಿಯನ್ನು ಜಪ್ತಿ ಮಾಡಬೇಕು. ಪ್ರಕೃತಿ ವಿಕೋಪದಲ್ಲಿ ರೈತರ ಸಾಲ ಮನ್ನಾ ಮಾಡಿ ಸರ್ಕಾರವೇ ಹೊಣೆ ಹೊತ್ತು, ರೈತರು, ಬಡವರು, ಮಹಿಳೆಯರು, ಕುಶಲಕರ್ಮಿಗಳು, ಬೀದಿ ವ್ಯಾಪಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಹೆಚ್ಚು ಸಾಲ ಸೌಲಭ್ಯ ಒದಗಿಸಬೇಕು. ಸಾಲ ವಸೂಲಿಯ ಹೆಸರಿನಲ್ಲಿ ರೈತರ ಮೇಲಿನ ದೌರ್ಜನ್ಯಕ್ಕೆ ಅಂಕುಶ ಹಾಕಿ, ರಾಷ್ಟ್ರೀಕೃತ ಬ್ಯಾಂಕುಗಳ ಶುಲ್ಕಗಳನ್ನು ಕಡಿಮೆ ಮಾಡಬೇಕು” ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕನ್ನಡ ಪ್ರಜ್ಞೆ ಎಂದರೆ ಕನ್ನಡ ಅಸ್ಮಿತೆ, ವಿವೇಕ, ಸಮಗ್ರ ಅಭಿವೃದ್ಧಿಯ ಬೌದ್ಧಿಕ ಪ್ರೇರಣೆ:ಜಿಎನ್ಎಂ

ಪ್ರತಿಭಟನೆಯಲ್ಲಿ ಸಂಯುಕ್ತ ಕರ್ನಾಟಕ ಹೋರಾಟದ ಮುಖಂಡರಾದ ಹೊನ್ನೂರು ಮುನಿಯಪ್ಪ, ಮರುಳಸಿದ್ದಯ್ಯ, ಅಣಬೇರು ತಿಪ್ಪೇಸ್ವಾಮಿ, ಶಿವಾಜಿ ರಾವ್, ಡಾ. ಸುನಿತ್ ಕುಮಾರ್, ಸುರೇಶ್, ಹಾಲೇಶ್, ಆವರಗೆರೆ ಉಮೇಶ್, ಮಧು ತೊಗಲೇರಿ, ಪವಿತ್ರ ಅರವಿಂದ್, ಚಂದ್ರು, ರಮೇಶ್ ದಾಸರ್, ಲಕ್ಷ್ಮಣ್, ಆವರಗೆರೆ ಚಂದ್ರು, ಸರೋಜ ಸೇರಿದಂತೆ ಇತರ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...