ಆಂಧ್ರ ಪ್ರದೇಶ | ಕಲಬೆರಕೆ ಹಾಲು ಸೇವನೆ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

Date:

ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಲಬೆರಕೆ ಹಾಲು ಸೇವನೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ರಾಜಮಹೇಂದ್ರವರಂನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಭಾನುವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫೆಬ್ರವರಿ 22ರಂದು ಲಾಲಾಚೆರುವಿನ ಕೆಲವು ಭಾಗಗಳಲ್ಲಿ ಪೂರೈಸಲಾದ ಕಲಬೆರಕೆ ಹಾಲಿ ಸೇವನೆಯಿಂದಾಗಿ ಹಲವು ಮಂದಿಗೆ ವಾಂತಿ, ಹೊಟ್ಟೆ ನೋವು, ಮೂತ್ರಪಿಂಡದ ಸಮಸ್ಯೆ ಕಾಣಿಸಿಕೊಂಡಿತ್ತು. ಅನಾರೋಗ್ಯದಿಂದಾಗಿ ಹಲವು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈವರೆಗೆ 16 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಆಂಧ್ರದಲ್ಲಿ ಕಲುಷಿತ ಹಾಲು ಸೇವನೆ: ಮೃತರ ಸಂಖ್ಯೆ 13ಕ್ಕೆ ಏರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಯೋಗಾಲಯದ ಪರೀಕ್ಷೆಯಲ್ಲಿ ವಿಷಕಾರಿಯಾದ ಎಥಿಲೀನ್ ಗ್ಲೈಕೋಲ್‌ ಹಾಲಿನಲ್ಲಿ ಕಂಡು ಬಂದಿತ್ತು. ಮೂತ್ರಪಿಂಡ ಸಮಸ್ಯೆಯಾಗಿ ಬಹು-ಅಂಗಾಂಗ ವೈಫಲ್ಯವಾಗಿತ್ತು ಎಂದು ಭಾನುವಾರ ಬಿಡುಗಡೆ ಮಾಡಿದ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ತೀವ್ರ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ರಕ್ತದಲ್ಲಿನ ಯೂರಿಯಾ ಮತ್ತು ಸೀರಮ್ ಕ್ರಿಯೇಟಿನೈನ್ ಮಟ್ಟಗಳು ಹೆಚ್ಚಾಗಿ ಕಂಡುಬಂದಿದೆ” ಎಂದೂ ಹೇಳಲಾಗಿದೆ.

ಕೊರುಕೊಂಡ ಮಂಡಲದ ನರಸಪುರಂ ಗ್ರಾಮದ ಡೈರಿ ಘಟಕದಿಂದ 100ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಲು ಪೂರೈಕೆ ಮಾಡಲಾಗುತ್ತದೆ. ಇಲ್ಲಿಂದಲೇ ಪೂರೈಕೆಯಾದ ಹಾಲಿನಲ್ಲಿ ಕಲಬೆರಕೆಯಾಗಿರುವ ಶಂಕೆಯಿದೆ. ಆದ್ದರಿಂದ ಘಟಕದಲ್ಲಿ ಪೂರೈಕೆಯನ್ನು ಕೂಡಲೇ ನಿಲ್ಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...