ಪಶ್ಚಿಮ ಬಂಗಾಳ ಸೇರಿ ಇತರ ರಾಜ್ಯಗಳಲ್ಲಿ ಶೀಘ್ರದಲ್ಲೇ ಎಸ್‌ಐಆರ್ ಘೋಷಣೆ: ಮುಖ್ಯ ಚುನಾವಣಾ ಆಯುಕ್ತ

Date:

ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಮೂವರು ಆಯುಕ್ತರು ಸೇರಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದರು.

“ಮತ ಕಳ್ಳತನ” ಕುರಿತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯ ಆರೋಪಗಳ ಬಗ್ಗೆ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ರಾಜಕೀಯ ಪಕ್ಷವು ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿರುತ್ತದೆ. ಆಯೋಗವು ಎಲ್ಲರಿಗೂ ಸಮಾನ ಅವಕಾಶ ನೀಡುತ್ತದೆ ಮತ್ತು ತನ್ನ ಸಾಂವಿಧಾನಿಕ ಜವಾಬ್ದಾರಿಯಿಂದ ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಕಾಪಾಡಲು ಆಯೋಗ ಬದ್ಧವಾಗಿದೆ. ದೇಶದಾದ್ಯಂತ ನಡೆಯುವ ಚುನಾವಣಾ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದೆ. 1 ಕೋಟಿಗೂ ಅಧಿಕ ಅಧಿಕಾರಿಗಳು, ಬೂತ್ ಮಟ್ಟದ ಏಜೆಂಟರು ದೇಶಾದ್ಯಂತ ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಚುನಾವಣಾ ಆಯೋಗವು ಎಲ್ಲ ರಾಜಕೀಯ ಪಕ್ಷಗಳನ್ನು ಸಮಾನವಾಗಿ ಪರಿಗಣಿಸುತ್ತದೆ. ಹಾಗೆಯೇ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕನು ಮತದಾರರಾಗಿ ನೋಂದಾಯಿಸಿಕೊಂಡು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಕರೆ ನೀಡಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 6.5 ಲಕ್ಷ ಮತಗಳ ಪೈಕಿ 1 ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ವಿಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ವಿಶೇಷವಾಗಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 6.5 ಲಕ್ಷ ಮತಗಳ ಪೈಕಿ 1 ಲಕ್ಷಕ್ಕೂ ಅಧಿಕ ಮತಗಳು ಕಳ್ಳತನಕ್ಕೆ ಒಳಗಾಗಿವೆ ಎಂದು ಹೇಳಿದ್ದರು. ಅಲ್ಲದೆ, ಒಂದೇ ಮನೆಯಲ್ಲಿ 80 ಜನರು ನೋಂದಾಯಿಸಿಕೊಂಡಿದ್ದು, 120 ಚದರ ಅಡಿ ಕೋಣೆಯಲ್ಲಿ ಬಹುಸಂಖ್ಯೆ ಮತದಾರರು ಇದ್ದರು ಎಂದು ಉದಾಹರಣೆಗಳನ್ನು ನೀಡಿದ್ದರು. ಇದು 48 ಲೋಕಸಭಾ ಕ್ಷೇತ್ರಗಳಲ್ಲಿ ನಡೆದಿದೆ ಎಂದು ಅವರು ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...