ಒತ್ತಡದಿಂದ ಡಬ್ಲ್ಯುಎಫ್ಐ ಅಮಾನತು ನಿರ್ಧಾರ: ವಿಪಕ್ಷ ನಾಯಕರ ಆರೋಪ

Date:

ನೂತನವಾಗಿ ಆಯ್ಕೆಯಾಗಿರುವ ಡಬ್ಲ್ಯುಎಫ್ಐ (ಭಾರತೀಯ ಕುಸ್ತಿ ಒಕ್ಕೂಟ) ಅನ್ನು ಅಮಾನತುಗೊಳಿರುವ ಸರಕಾರದ ನಿರ್ಧಾರವು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ಸಾಕಾಗುವುದಿಲ್ಲ ಎಂದು ಪ್ರತಿಪಕ್ಷ ನಾಯಕರು ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬೆಂಬಲಿಗರಿಗೆ ಕ್ರೀಡಾ ಸಂಸ್ಥೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಏಕೆ ಅವಕಾಶ ನೀಡಲಾಯಿತು ಎಂದು ಅವರು ಪ್ರಶ್ನಿಸಿದ್ದಾರೆ.

ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ, ಬಿಜೆಪಿ ನೇತೃತ್ವದ ಸಚಿವಾಲಯವು ಮಹಿಳಾ ಕುಸ್ತಿಪಟುಗಳಿಗೆ ಸಹಾಯ ಮಾಡದೆ ತಮ್ಮನ್ನು ತಾವು ಮುಕ್ತಗೊಳಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ನಾಯಕ ಉದಿತ್ ರಾಜ್, “ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಪ್ರತಿಭಟನಾ ರೀತಿಯು ಡಬ್ಲ್ಯು ಎಫ್ಐ ಚುನಾವಣೆಯನ್ನು ಅಮಾನತುಗೊಳಿಸುವಂತೆ ಕ್ರೀಡಾ ಸಚಿವಾಲಯದ ಮೇಲೆ ಒತ್ತಡ ಹೆಚ್ಚಿಸಿದೆ. ಇದು ಸ್ವಾಗತಾರ್ಹವದರೂ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಬ್ರಿಜ್ ಭೂಷಣ್ ಅವರ ಬೆಂಬಲಿಗರ ಆಯ್ಕೆಯಿಂದ ಉಂಟಾದ ಆಕ್ರೋಶದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಫಕ್ರುಲ್ ಹಸನ್ ಚಾಂದ್ ಆರೋಪಿಸಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಚುನಾವಣೆಗಳು ಡಿಸೆಂಬರ್ 21 ರಂದು ನಡೆದಿದ್ದು, ಸಂಜಯ್‌ ಸಿಂಗ್ ಮತ್ತು ಅವರ ತಂಡ ಚುನಾವಣೆಯಲ್ಲಿ ಹೆಚ್ಚಿನ ಅಂತರದಿಂದ ಗೆದ್ದಿದೆ.

ಕುಸ್ತಿ ಸಂಸ್ಥೆಯು ಅಂಡರ್ 15 ಮತ್ತು ಅಂಡರ್ 20 ರಾಷ್ಟ್ರೀಯ ಕ್ರೀಡೆಗಳನ್ನು ಸೂಕ್ತ ಮಾನಡಂಡಗಳನ್ನು ಅನುಸರಿಸದೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಕ್ರೀಡಾ ಸಚಿವಾಲಯ ಅಮಾನತು ನಿರ್ಧಾರ ಕೈಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...