‘ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಮಲ್ಲಿಕಾರ್ಜುನ ಖರ್ಗೆ

Date:

ವಂದೇ ಮಾತರಂ’ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರಲಾಲ್ ನೆಹರು ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರವನ್ನು ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್‌ರಂತಹ ನಾಯಕರು ಸಾಮೂಹಿಕವಾಗಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಬರೆದ ಹಾಡನ್ನು ಕಾಂಗ್ರೆಸ್ ‘ವಿಭಜಿಸಿದೆ’ ಎಂದು ಆಡಳಿತಾರೂಢ ಬಿಜೆಪಿ ಆರೋಪ ಮಾಡುತ್ತಿದ್ದಂತೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ,ಕಾಂಗ್ರೆಸ್ ನಾಯಕರು ಯಾವಾಗಲೂ ‘ವಂದೇ ಮಾತರಂ’ ಹಾಡುತ್ತಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಿತೆಯ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರದ ಹಿಂದೆ ತುಷ್ಟೀಕರಣ ರಾಜಕೀಯವಿದೆ. ವಂದೇ ಮಾತರಂ ಗೀತೆಗೆ ಕತ್ತರಿ ಹಾಕಿದ್ದು ದೇಶದ ವಿಭಜನೆಗೆ ಕಾರಣವಾಯಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಗಳು ಬದಲಾದರೂ ಉತ್ತರ ಕರ್ನಾಟಕದ ಜನರ ಬದುಕು ಬದಲಾಗಲಿಲ್ಲವೇಕೆ?

ಇಂದು ‘ವಂದೇ ಮಾತರಂ’ ಘೋಷಣೆ ಕೂಗುತ್ತಾ ತಮ್ಮ ಭಾಷಣವನ್ನು ಆರಂಭಿಸಿದ ಖರ್ಗೆ, “ನಾವು ಯಾವಾಗಲೂ ವಂದೇ ಮಾತರಂ ಹಾಡುತ್ತಲೇ ಇದ್ದೇವೆ. ಆದರೆ ವಂದೇ ಮಾತರಂ ಹಾಡದವರು ಈಗ ಅದನ್ನು ಹಾಡಲು ಪ್ರಾರಂಭಿಸಿದ್ದಾರೆ. ಅದು ವಂದೇ ಮಾತರಂನ ಶಕ್ತಿ. ಇದು ರಾಷ್ಟ್ರೀಯ ಹಬ್ಬ, ಚರ್ಚೆಯಲ್ಲ ಎಂದರು.

“1921 ರಲ್ಲಿ ಅಸಹಕಾರ ಚಳುವಳಿ ಪ್ರಾರಂಭವಾದಾಗ, ಕಾಂಗ್ರೆಸ್ ಸದಸ್ಯರು ವಂದೇ ಮಾತರಂ ಜಪಿಸುತ್ತಾ ಜೈಲಿಗೆ ಹೋಗುತ್ತಿದ್ದರು. ನೀವು ಏನು ಮಾಡಿದ್ದೀರಿ? ನೀವು ಬ್ರಿಟಿಷರಿಗಾಗಿ ಕೆಲಸ ಮಾಡುತ್ತಿದ್ದೀರಿ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.
“ನೀವು ನಮಗೆ ದೇಶಭಕ್ತಿಯನ್ನು ಕಲಿಸುತ್ತಿದ್ದೀರಾ? ನೀವು ದೇಶಭಕ್ತಿಗೆ ಹೆದರಿ ಬ್ರಿಟಿಷರಿಗೆ ಸೇವೆ ಸಲ್ಲಿಸಿದ್ದೀರಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.

ಜವಾಹರಲಾಲ್ ನೆಹರೂ ಅವರನ್ನು ಅವಮಾನಿಸಲು ಪ್ರಧಾನಿ ಮೋದಿ ಎಲ್ಲಾ ಅವಕಾಶವನ್ನು ಬಳಸಿಕೊಳ್ಳುತ್ತಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಅಂಗೀಕರಿಸಿದ ಕವಿತೆಯ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಣಯವನ್ನು ನೆಹರೂ ಒಬ್ಬರೇ ತೆಗೆದುಕೊಂಡಿಲ್ಲ. ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಮದನ್ ಮೋಹನ್ ಮಾಳವಿಯಾ ಮತ್ತು ಆಚಾರ್ಯ ಜೆ.ಬಿ. ಕೃಪಲಾನಿ ಅವರಂತಹ ನಾಯಕರು ಸಾಮೂಹಿಕವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು.

ಕವಿತೆಯ ಮೊದಲ ಎರಡು ಚರಣಗಳನ್ನು ಹಾಡಿನ ಉಳಿದ ಭಾಗದಿಂದ ಬೇರ್ಪಡಿಸುವುದರಿಂದ “ಯಾವುದೇ ತೊಂದರೆ ಇಲ್ಲ” ಎಂದು ಟ್ಯಾಗೋರ್ ಹೇಳಿರುವುದನ್ನು ಖರ್ಗೆ ಉಲ್ಲೇಖಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...