ಸಾಲ ಮರುಪಾವತಿ ವಿಳಂಬ: ಮಹಿಳೆಯ ತಲೆ ಬೋಳಿಸಿ ವಿಕೃತಿ ಮೆರೆದ ಜನ

Date:

ಮಹಿಳೆಯೊಬ್ಬರು ತಾವು ಪಡೆದಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿಲ್ಲವೆಂಬ ಕಾರಣಕ್ಕೆ, ಆಕೆಯ ತಲೆ ಬೋಳಿಸಿ, ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ತ್ರಿಪುರಾದ ಅಗರ್ತಲಾದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಗೆ ಅಗರ್ತಲಾದಲ್ಲಿರುವ ಸ್ವ-ಸಹಾಯ ಗುಂಪು (ಎಸ್‌ಎಚ್‌ಜಿ) ಸಾಲ ನೀಡಿತ್ತು. ಆ ಸಾಲವನ್ನು ಮರುಪಾವತಿ ಮಾಡಿಲ್ಲವೆಂದು ಎಸ್‌ಎಚ್‌ಜಿಯ ಪಾಲುದಾರರು ಆಕೆಯ ತಲೆ ಬೋಳಿಸಿ ವಿಕೃತಿ ಮೆರೆದಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಮಹಿಳಾ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಬಿಶಾಲ್‌ಗಢ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣಕಾಸಿನ ವಿವಾದದಿಂದಾಗಿ ಎಚ್‌ಎಸ್‌ಜಿಯ ಮಹಿಳೆಯ ಗುಂಪು ತನ್ನ ತಲೆ ಬೋಳಿಸಿ, ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಪತಿ ಎಸ್‌ಎಚ್‌ಜಿಯಿಂದ ಸಾಲ ಪಡೆದಿದ್ದರು. ಅದನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಸಾಧ್ಯವಾಗಿರಲಿಲ್ಲ. ಮರುಪಾವತಿ ಸಮಯ ನೀಡುವಂತೆ ಎಚ್‌ಎಚ್‌ಜಿ ಬಳಿ ಮನವಿ ಮಾಡಿದ್ದೆವು. ಆದರೆ, ನನ್ನ ಮನೆಗೆ ನುಗ್ಗಿದ ಸುಮಾರು 15 ಮಹಿಳೆಯರಿದ್ದ ಗುಂಪು, ನನ್ನನ್ನು ಮನೆಯಿಂದ ಹೊರಗೆ ಎಳೆದೊಯ್ದು ಅವಾಚ್ಯವಾಗಿ ನಿಂದಿಸಿ, ಥಳಿಸಿದ್ದಾರೆ. ನನ್ನ ತಲೆ ಬೋಳಿಸಿದ್ದಾರೆ” ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ 74, 115(2) ಮತ್ತು 3 (5) ಅಡಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...