ದೆಹಲಿ | ಮೂವರು ವಿದ್ಯಾರ್ಥಿಗಳ ಸಾವು; ಕೋಚಿಂಗ್ ಸೆಂಟರ್ ಮಾಲೀಕ, ನಿರ್ವಾಹಕ ಬಂಧನ

Date:

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಕೋಚಿಂಗ್ ಸೆಂಟರ್‌ ಐಎಎಸ್ ಸ್ಟಡಿ ಸರ್ಕಲ್‌ನ ಮಾಲೀಕ ಮತ್ತು ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿದೆ.

ಭಾನುವಾರ ಮುಂಜಾನೆ ನೀರು ತುಂಬಿದ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ವಿದ್ಯಾರ್ಥಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಳಿಕ “ಮಾಲೀಕ ಅಭಿಷೇಕ್ ಗುಪ್ತಾ ಮತ್ತು ಕೋ-ಆರ್ಡಿನೇಟರ್‌ ದೇಶಪಾಲ್ ಸಿಂಗ್ ವಿರುದ್ಧ ನರಹತ್ಯೆ ಮತ್ತು ನಿರ್ಲಕ್ಷ್ಯದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ ಎಂ ಹರ್ಷವರ್ಧನ್ ತಿಳಿಸಿದ್ದಾರೆ.

“ಪ್ರಸ್ತುತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಕೊನೆಗೊಂಡಿದೆ. ನೆಲಮಾಳಿಗೆಯಿಂದ ಒಟ್ಟು ಮೂರು ಶವಗಳನ್ನು ಹೊರತೆಗೆಯಲಾಗಿದೆ. ಎಲ್ಲರ ಗುರುತು ಪತ್ತೆಯಾಗಿದೆ. ಘಟನೆಯ ಬಗ್ಗೆ ನಾವು ಕುಟುಂಬ ಸದಸ್ಯರಿಗೆ ತಿಳಿಸಿದ್ದೇವೆ” ಎಂದು ಡಿಸಿಪಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ದೆಹಲಿ | ಕೋಚಿಂಗ್ ಸೆಂಟರ್‌ ಜಲಾವೃತ; ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

ಮೃತ ವಿದ್ಯಾರ್ಥಿಗಳನ್ನು ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನೆವಿನ್ ಡಾಲ್ವಿನ್ (28) ಎಂದು ಗುರುತಿಸಲಾಗಿದೆ.

ಶ್ರೇಯಾ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವರಾಗಿದ್ದರೆ, ತಾನಿಯಾ ಸೋನಿ ತೆಲಂಗಾಣದವರಾಗಿದ್ದಾರೆ. ನವೀನ್ ಡಾಲ್ವಿನ್ ಕೇರಳದ ಎರ್ನಾಕುಲಂನಿಂದ ಬಂದ ವಿದ್ಯಾರ್ಥಿಯಾಗಿದ್ದಾರೆ.

ಇನ್ನು ದೆಹಲಿಯ ಮೇಯರ್ ಶೆಲ್ಲಿ ಒಬೆರಾಯ್ ಅವರು ಕಟ್ಟಡಗಳ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ ಎಲ್ಲಾ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ. ಅಂತಹ ಕೋಚಿಂಗ್ ಸೆಂಟರ್‌ಗಳು ಕಟ್ಟಡದ ನಿಯಮಗಳ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ದೆಹಲಿಯ ಮಹಾನಗರ ಪಾಲಿಕೆಯ (ಎಂಸಿಡ) ಯಾವುದೇ ಅಧಿಕಾರಿಗಳು ದುರಂತಕ್ಕೆ ಹೊಣೆಗಾರರೇ ಎಂದು ತಿಳಿಯಲು ತಕ್ಷಣ ತನಿಖೆ ನಡೆಸಬೇಕು ಎಂದು ದೆಹಲಿ ಮೇಯರ್ ಹೇಳಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...