ದೆಹಲಿ ವಾಯುಮಾಲಿನ್ಯ | ‘ಗ್ಯಾಸ್ ಚೇಂಬರ್’ ಪ್ರವೇಶಿಸಿದಂತಿತ್ತು: ಪ್ರಿಯಾಂಕಾ ಗಾಂಧಿ

Date:

ಕೇರಳದ ವಯನಾಡ್‌ ಕ್ಷೇತ್ರದಲ್ಲಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇರಳದಿಂದ ದೆಹಲಿಗೆ ಹಿಂದಿರುಗಿದ್ದಾರೆ. ದೆಹಲಿಗೆ ತಲುಪುತ್ತಿದ್ದಂತೆ ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಿಯಾಂಕಾ ಗಾಂಧಿ,’ಗ್ಯಾಸ್ ಚೇಂಬರ್’ ಪ್ರವೇಶಿಸಿದಂತಿತ್ತು ಎಂದು ಹೇಳಿಕೊಂಡಿದ್ದಾರೆ.

ವಿಶ್ವದಲ್ಲೇ ಅತೀ ಕಲುಷಿತ ಗಾಳಿ ಹೊಂದಿರುವ ನಗರವಾದ ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಇನ್ನಷ್ಟು ಕಲುಷಿತಗೊಳ್ಳುತ್ತಿದೆ. ವರ್ಷ ಕಳೆದಂತೆ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯ ಇಂದು ನಿರ್ಧಾರ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಚ್ಛವಾದ ಗಾಳಿ ಇರುವ ಮತ್ತು ಎಕ್ಯೂಐ (ಗಾಳಿಯ ಗುಣಮಟ್ಟ) 35ರಷ್ಟಿರುವ ವಯನಾಡ್‌ನಿಂದ ದೆಹಲಿಗೆ ಹಿಂತಿರುಗುವುದು ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಿದೆ. ಗಾಳಿಯಲ್ಲಿರುವ ಹೊಗೆಯ ಹೊದಿಕೆ ನೋಡಿ ಇನ್ನಷ್ಟು ಆಘಾತವಾಯಿತು” ಎಂದು ಪ್ರಿಯಾಂಕಾ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ದೆಹಲಿಯ ವಾಯುಮಾಲಿನ್ಯವು ಪ್ರತಿ ವರ್ಷವೂ ಹದಗೆಡುತ್ತಿದೆ. ನಾವು ಎಲ್ಲರೂ ಜೊತೆಯಾಗಬೇಕು ಮತ್ತು ಶುದ್ಧ ಗಾಳಿ ಪಡೆಯಲು ಪರಿಹಾರ ಕಂಡುಕೊಳ್ಳಬೇಕು. ಈ ಗಾಳಿಯನ್ನು ಉಸಿರಾಡುವುದು ವಿಶೇಷವಾಗಿ ಮಕ್ಕಳು, ಹಿರಿಯರು ಮತ್ತು ಉಸಿರಾಟದ ತೊಂದರೆ ಇರುವವರಿಗೆ ಅಸಾಧ್ಯವಾಗಿದೆ. ಇದಕ್ಕೆ ಏನಾದರೂ ಪರಿಹಾರವನ್ನು ನಾವು ಕಂಡುಕೊಳ್ಳಲೇಬೇಕು” ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಮೊದಲ ಬಾರಿ ಚುನಾವಣಾ ಕಣಕ್ಕೆ ಇಳಿದ ವಯನಾಡ್ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆಯು ಬುಧವಾರ ನಡೆದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಿಯಾಂಕಾ ವಯನಾಡ್‌ನಿಂದ ದೆಹಲಿಗೆ ಹಿಂದಿರುಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...