ದೆಹಲಿ | ಬಾಲಕ ಸೇರಿ ಐವರನ್ನು ಕೊಂದ ಆಡಿ ಕಾರು

Date:

ಫುಟ್‌ಪಾತ್‌ನಲ್ಲಿ ಮಲಗಿದ್ದ ಐದು ಜನರ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಉತ್ಸವ್ ಶೇಖರ್ ಎಂಬಾತ ಚಲಾಯಿಸುತ್ತಿದ್ದ ಆಡಿ ಕಾರು ಹರಿದಿದ್ದು, ಐವರೂ ಸ್ಥಲದಲ್ಲೇ ಮೃತಪಟ್ಟಿರುವ ದುರ್ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ನೈಋತ್ಯ ಭಾಗದಲ್ಲಿರುವ ವಸಂತ್ ವಿಹಾರ್‌ನಲ್ಲಿ ಘಟನೆ ನಡೆದಿದೆ. ಆರೋಪಿ ಉತ್ಸವ್ ಶೇಖರ್ ಮದ್ಯಪಾನ ಮಾಡಿ, ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದ ಎಂದು ವರದಿಯಾಗಿದೆ.

ಕಾರು ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗದ ಮೇಲೆ ಹತ್ತಿದ್ದು, ಅಲ್ಲಿ ಮಲಗಿದ್ದವರ ಮೇಲೆ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಯ್ಡಾದಿಂದ ದ್ವಾರಕಾದಲ್ಲಿರುವ ತನ್ನ ಮನೆಗೆ ಹಿಂತಿರುಗುತ್ತಿದ್ದ ಶೇಖರ್, ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರನ್ನು ಕೊಂದು ಸುಮಾರು 200 ಮೀಟರ್ ಮುಂದೆ ಹೋಗಿ, ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ವರದಿಯಾಗಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಬಂದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮೃತ ಸಂಸತ್ರಸ್ತರನ್ನು ಲಾಧಿ (40), ಅವರ ಮಗಳು ಬಿಮ್ಲಾ (8), ಅವರ ಪತಿ ಸಬಾಮಿ ಅಲಿಯಾಸ್ ಚಿರ್ಮಾ (45), ಹಾಗೂ ದಂಪತಿಗಳಾದ ರಾಮ್ ಚಂದರ್ (45) ಮತ್ತು ನಾರಾಯಣಿ (35) ಎಂದು ಗುತಿಸಲಾಗಿದೆ. ಈ ಐವರೂ ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...