ದೆಹಲಿ ಸ್ಪೋಟ ಪ್ರಕರಣ | ಭದ್ರತಾ ಲೋಪ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

Date:

13 ಜೀವನಗಳನ್ನು ಬಲಿ ಪಡೆದ ದೆಹಲಿಯ ಕೆಂಪು ಕೋಟೆ ಬಳಿಕ ಸ್ಪೋಟ ಪ್ರಕರಣದಲ್ಲಿ ಭದ್ರತಾ ಲೋಪಗಳ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ. ಅಮಿತ್ ಶಾ ಅವರಿಗೆ ‘ಜವಾಬ್ದಾರಿಯ ಪ್ರಜ್ಞೆ’ ಇದ್ದರೆ ಅವರು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆಗ್ರಹಿಸಿದ್ದಾರೆ.

“ಯುಪಿಎ ಅಧಿಕಾರದಲ್ಲಿದ್ದಾಗ ಮುಂಬೈ ಸ್ಫೋಟ ಸಂಭವಿಸಿದಾಗ, ಅಂದಿನ ಗೃಹ ಸಚಿವರು ಭದ್ರತಾ ಲೋಪದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಆ ಸಂದರ್ಭದಲ್ಲಿ, ಭದ್ರತಾ ವೈಫಲ್ಯದ ನೈತಿಕ ಹೊಣೆಗಾರಿಕೆ ಕಾರಣಕ್ಕಾಗಿ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಒತ್ತಾಯಿಸಿದ್ದವು” ಎಂದು ಅವರು ನೆನಪಿಸಿದ್ದಾರೆ.

“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಾವಾಗಲೂ ಸಂಸತ್ತಿನಲ್ಲಿ ‘ಸುಳ್ಳು’ ಹೇಳುತ್ತಿದ್ದರು. ತಮ್ಮ ಆಡಳಿತದಲ್ಲಿ ದೇಶದಲ್ಲಿ ಯಾವುದೇ ಗಲಭೆಗಳು ಅಥವಾ ಸ್ಫೋಟಗಳು ನಡೆದಿಲ್ಲ ಎನ್ನುತ್ತಿದ್ದರು. ಈಗ, ಅವರ ಕಣ್ಣುಗಳ ಮುಂದೆ, ಅವರ ಕಚೇರಿಗೆ ಬಹಳ ಸಮೀಪದಲ್ಲಿಯೇ ಈ ಸ್ಫೋಟ ಸಂಭವಿಸಿದೆ. ಸರ್ಕಾರವು ಸ್ಪಷ್ಟವಾದ ತನಿಖೆ ನಡೆಸಬೇಕು. ನಿಜವಾದ ಕಾರಣವನ್ನು ದೇಶದ ಎದುರು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮುಂದುವರೆದ ಮೋದಿ ಮುಸ್ಲಿಂ ದ್ವೇಷ ಭಾಷಣ; ವಿಪಕ್ಷಗಳ ಟೀಕೆಗೆ ರಾಮನ ಎಳೆದುತಂದ ಮೋದಿ

ಈ ದಾಳಿಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯ ಎಂದು ಬಣ್ಣಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಭಯೋತ್ಪಾದಕ ಕೃತ್ಯದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಇದರಿಂದ, ಮುಂದಿನ ದಿನಗಳಲ್ಲಿ ದಾಳಿಗಳನ್ನು ತಡೆಯಲು ಸಾಧ್ಯವಾಗುತ್ತದೆ” ಎಂದು ಹೇಳಿದ್ದಾರೆ.

“ಗುಪ್ತಚರ ಇಲಾಖೆ ಸೇರಿದಂತೆ ಭದ್ರತೆ ಕುರಿತು ಕಾರ್ಯನಿರ್ವಹಿಸುವ ಎಲ್ಲ ಉನ್ನತ ಸಂಸ್ಥೆಗಳು ಕಾರ್ಯಾಚರಣೆ ನಡೆಸುವ ರಾಷ್ಟ್ರ ರಾಜಧಾನಿಯಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ” ಎಂದು ಖರ್ಗೆ ಹೇಳಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸ್ಪೋಟ ಪ್ರಕರಣವನ್ನು ಕಾಂಗ್ರೆಸ್‌ ಗಂಭೀರವಾಗಿ ಚರ್ಚೆಗೆ ತರಲಿದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...