ದೆಹಲಿ ಸ್ಪೋಟ | ಬಂಧಿತ ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIA

Date:

ಕಳೆದ ಸೋಮವಾರ (ನ. 10) ದೆಹಲಿಯ ಕೆಂಪುಕೋಟೆಯ ಬಳಿ ಕಾರು ಬಾಂಬ್‌ ಸ್ಫೋಟ ಸಂಭವಿಸಿ ಹನ್ನೆರಡು ಮಂದಿ ಮೃತಪಟ್ಟ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾರಿನಲ್ಲಿದ್ದ ಆತ್ಮಹತ್ಯಾ ಬಾಂಬರ್‌ ಡಾ ಉಮರ್‌ ಉನ್‌ ನಬಿಯೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಶಂಕೆಯಿಂದ ಹರಿಯಾಣದ ನುಹ್‌ ನಲ್ಲಿ ಡಾ ರೆಹಾನ್‌, ಡಾ ಮುಹಮ್ಮದ್‌, ಡಾ ಮುಸ್ತಕೀಮ್‌ ಹಾಗೂ ರಸಗೊಬ್ಬರ ವ್ಯಾಪಾರಿ ದಿನೇಶ್‌ ಸಿಂಗ್ಲಾ ಅವರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಅವರಿಗೂ ಈ ಸ್ಪೋಟಕ್ಕೂ ಯಾವುದೇ ಸಂಬಂಧವಿಲ್ಲ ಎಂಬ ನಿರ್ಧಾರಕ್ಕೆ ಎನ್‌ಐಎ ಬಂದಿದ್ದು, ಭಾನುವಾರ (ನ.16) ನಾಲ್ವರನ್ನು ಬಿಡುಗಡೆ ಮಾಡಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಡಾ ಉಮರ್‌ ಸಂಪರ್ಕದಲ್ಲಿದ್ದರು ಎಂಬ ಕಾರಣಕ್ಕೆ ಹಲವರನ್ನು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಈ ನಾಲ್ವರನ್ನು ಮೂರು ದಿನಗಳಿಂದ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...