ದೆಹಲಿ ಸ್ಫೋಟ: ಆಂತರಿಕ ಭದ್ರತೆಯಲ್ಲಿ ‘ಗಂಭೀರ ಲೋಪ’ಗಳ ಕುರಿತು ಭುಗಿಲೆದ್ದ ಪ್ರಶ್ನೆಗಳು

Date:

ದೆಹಲಿ ಸ್ಫೋಟದಲ್ಲಿ ಸಂಭವಿಸಿದ ಸಾವುಗಳಿಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಆಂತರಿಕ ಭದ್ರತೆಯಲ್ಲಿನ ‘ಗಂಭೀರ ಲೋಪ’ಗಳ ಪ್ರಶ್ನೆಗಳನ್ನು ಎತ್ತಿದ್ದಾರೆ. ಗೃಹ ಸಚಿವಾಲಯದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಸಂಜೆ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಸಮೀಪ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರು ಭೀಕರವಾಗಿ ಸ್ಪೋಟಗೊಂಡಿತ್ತು. ಆತ್ಮಹತ್ಯಾ ಬಾಂಬರ್‌ ಚಲಾಯಿಸುತ್ತಿದ್ದ ಕಾರು ಅದು ಎಂದು ಹೇಳಲಾಗಿದೆ. ಘಟನೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಬಿಹಾರದಲ್ಲಿ 2ನೇ ಹಂತದ ಮತದಾನ ನಡೆಯುವುದಕ್ಕೂ ಒಂದು ದಿನ ಮುಂಚಿತವಾಗಿ ಸಂಭವಿಸಿರುವ ಈ ಸ್ಪೋಟದ ಸುತ್ತ ರಾಜಕೀಯ ಆಯಾಮದ ಚರ್ಚೆಗಳು ನಡೆಯುತ್ತಿವೆ. 2019ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪುಲ್ವಾಮ ದಾಳಿ ನಡೆದಿತ್ತು. ಆ ದಾಳಿಯ ಹಿಂದಿದ್ದವರು, ಉದ್ದೇಶವೇನು ಎಂಬುದು ಈವರೆಗೆ ಪತ್ತೆಯಾಗಿಲ್ಲ. ಇದೀಗ, ಬಿಹಾರ ಚುನಾವಣೆಯ ಸಮಯದಲ್ಲಿ ಸ್ಪೋಟ ಸಂಭವಿಸಿದೆ. ಹೀಗಾಗಿ, ರಾಜಕೀಯ ಆಯಾಮದಲ್ಲಿ ನೋಡಬೇಕಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ, ಭದ್ರತಾ ಲೋಪಗಳ ಬಗ್ಗೆಯೂ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ. ದೆಹಲಿ ದುರಂತ ಕುರಿತು ಪೋಸ್ಟ್‌ ಮಾಡಿರುವ ಅಭಿಷೇಕ್ ಬ್ಯಾನರ್ಜಿ, “ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ನೋವಿನಿಂದ ಹೊರಬರಲು ಅವರಿಗಾಗಿ ನಾನು ಪ್ರಾರ್ಥಿಸುತ್ತೇನೆ. ನಮ್ಮ ರಾಷ್ಟ್ರ ರಾಜಧಾನಿಯ ಹೃದಯಭಾಗದಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ದುಃಖಕರವಾಗಿದೆ” ಎಂದು ಹೇಳಿದ್ದಾರೆ.

“ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ದೆಹಲಿ ಪೊಲೀಸರು ‘ಕಾನೂನು ಮತ್ತು ಸುವ್ಯವಸ್ಥೆ’ಯನ್ನು ಕಾಪಾಡುವ ಪ್ರಾಥಮಿಕ ಜವಾಬ್ದಾರಿಯನ್ನು ಹೊಂದಿದ್ದಾರೆ. ಹಾಗಾದರೆ, ಭದ್ರತೆಯಲ್ಲಿ ಇಂತಹ ಗಂಭೀರ ಲೋಪಗಳು ಸಂಭವಿಸಲು ಹೇಗೆ ಸಾಧ್ಯವಾಯಿತು” ಎಂದು ಪ್ರಶ್ನಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಸಾಧನೆಗಳೇ ಇಲ್ಲ; ವಿಪಕ್ಷ ನಾಯಕರ ವೈಯಕ್ತಿಕ ಟೀಕೆಗೆ ಜೋತು ಬಿದ್ದ ಬಿಜೆಪಿ

“ಭಾನುವಾರ ಹರಿಯಾಣದ ಫರಿದಾಬಾದ್‌ನಲ್ಲಿ ಸುಮಾರು 350 ಕೆಜಿ ಸ್ಫೋಟಕಗಳು ಮತ್ತು ಒಂದು ಅಸಾಲ್ಟ್ ರೈಫಲ್ ವಶಪಡಿಸಿಕೊಳ್ಳಲಾಗಿದೆ. ಸೋಮವಾರ ದೆಹಲಿಯಲ್ಲಿ ಸ್ಪೋಟ ಸಂಭವಿಸಿದೆ. ಈ ಎರಡೂ ಘಟನೆಗಳನ್ನು ಒಟ್ಟಿಗೆ ನೋಡಿದಾಗ, “ಆಂತರಿಕ ಭದ್ರತೆ ಮತ್ತು ಜಾಗರೂಕತೆಯಲ್ಲಿನ ಸ್ಪಷ್ಟ ವೈಫಲ್ಯಗಳ ಬಗ್ಗೆ ಆತಂಕಕಾರಿ ಪ್ರಶ್ನೆಗಳು ಹುಟ್ಟುತ್ತವೆ” ಎಂದು ಹೇಳಿದ್ದಾರೆ.

“ದುರಂತ ಘಟನೆ ಕುರಿತು ನಿಷ್ಪಕ್ಷಪಾತ, ತ್ವರಿತ ತನಿಖೆ ನಡೆಸಬೇಕು. ಸತ್ಯವನ್ನು ಬಹಿರಂಗಪಡಿಸಲು ಮತ್ತು ಜವಾಬ್ದಾರಿಯುತರನ್ನು ಸಂಪೂರ್ಣವಾಗಿ ಹೊಣೆಗಾರರನ್ನಾಗಿ ಮಾಡಲು ಅಗತ್ಯವಿದ್ದರೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...