ದೆಹಲಿ | ಮದರಸಾದಲ್ಲಿ ಬಾಲಕ ನಿಗೂಢವಾಗಿ ಸಾವು

Date:

ಈಶಾನ್ಯ ದೆಹಲಿಯ ದಯಾಲ್‌ಪುರದ ಮದರಸಾವೊಂದರಲ್ಲಿ ಓದುತ್ತಿದ್ದ ಐದು ವರ್ಷದ ಬಾಲಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಾಲಕನ ಕುತ್ತಿಗೆ, ಹೊಟ್ಟೆ ಮತ್ತು ತೊಡೆಸಂದು ಪ್ರದೇಶದಲ್ಲಿ ಗುಳ್ಳೆಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿ 9.52ಕ್ಕೆ ಬ್ರಿಜ್‌ಪುರಿ ಮದರಸಾದಿಂದ ಬಾಲಕನ ಸಾವಿನ ಬಗ್ಗೆ ಕರೆ ಬಂದಿದೆ.

“ಶುಕ್ರವಾರ ಸಂಜೆ 6.30ಕ್ಕೆ ಬಾಲಕನ ತಾಯಿಗೆ ತನ್ನ ಮಗ ಅಸ್ವಸ್ಥನಾಗಿದ್ದಾನೆ ಎಂದು ತಿಳಿಸಲಾಗಿದೆ. ಆಕೆ ಆತನನ್ನು ಬ್ರಿಜ್‌ಪುರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಆದರೆ ಅಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಬಾಲಕನ ತಾಯಿ ತನ್ನ ಮಗನ ಶವದೊಂದಿಗೆ ಮದರಸಾಕ್ಕೆ ಮರಳಿದ್ದು ಮೃತದೇಹವನ್ನು ರಸ್ತೆಯಲ್ಲೇ ಇಟ್ಟು ಮದರಸಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು: ಮದರಸಾಕ್ಕೆ ಹೋಗಿ ಹೆಣ್ಣುಮಗಳಿಗೆ ಥಳಿಸಿದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ; ಸಂತ್ರಸ್ತ ಬಾಲಕಿ ಹೇಳಿಕೆ

ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಜಿಟಿಬಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸೂಕ್ತ ತನಿಖೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಹಾಜಿ ದಿನ್ ಮೊಹಮ್ಮದ್ ಅವರು ಮದ್ರಸಾದ ಪ್ರಾಂಶುಪಾಲರಾಗಿದ್ದು, ಸುಮಾರು 250 ಹುಡುಗರು ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಈ ಪೈಕಿ ಸುಮಾರು 150 ಮಂದಿ ದೆಹಲಿಯಿಂದ ಹೊರಗಿನವರಾಗಿದ್ದಾರೆ. ಮುಖ್ಯವಾಗಿ ಅಧಿಕ ಮಂದಿ ಉತ್ತರ ಪ್ರದೇಶವರಾಗಿದ್ದಾರೆ ಎಂದು ವರದಿಯಾಗಿದೆ.

ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...