ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ‘ಗೂಂಡಾಗಿರಿ’ ವಿಡಿಯೋ ವೈರಲ್!

Date:

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕಿ ರೇಖಾ ಗುಪ್ತಾ ಅವರು ಗುರುವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಪ್ರಮಾಣವಚನ ಸ್ವೀಕರಿಸಿರುವ ಸಂದರ್ಭದಲ್ಲಿಯೇ ಅವರ ಹಳೆಯದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೇಖಾ ಗುಪ್ತಾ ಅವರು ದೆಹಲಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಗೂಂಡಾಗಿರಿ ನಡೆಸಿರುವ ವಿಡಿಯೋ ಅದಾಗಿದ್ದು, ಗೂಂಡಾಗಿರಿ ಮಾಡುವವರು ಈಗ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹಲವರು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವೈರಲ್ ಆಗಿರುವ ವಿಡಿಯೋ 2023ರ ಘಟನೆಯದ್ದು. ವಿಡಿಯೋದಲ್ಲಿ; ದೆಹಲಿ ಪಾಲಿಕೆಯಲ್ಲಿ ರೇಖಾ ಗುಪ್ತಾ ಅವರು ವೇದಿಕೆ ಮೇಲೆ ನುಗ್ಗಿ, ಟೇಬಲ್ಅನ್ನು ತಳ್ಳಿ, ಮೈಕ್‌ ಅನ್ನು ಕಿತ್ತು, ಟೇಬಲ್‌ಗೆ ಬಡಿಯುತ್ತಿರುವುದು ಸೆರೆಯಾಗಿದೆ.

2023ರಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆದಿತ್ತು. ರಹಸ್ಯ ಮತದಾನದ ಸಮಯದಲ್ಲಿ ಕೌನ್ಸಿಲರ್‌ಗಳು ತಮ್ಮ ಮೊಬೈಲ್‌ಗಳ ಮೂಲಕ ಮತಪತ್ರಗಳ ಛಾಯಾಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಆ ವೇಳೆ, ರೇಖಾ ಗುಪ್ತಾ ಮತ್ತು ಇತರರು ವೇದಿಕೆಗೆ ನುಗ್ಗಿ, ಅಲ್ಲಿದ್ದ ಟೇಬಲ್‌ ಮತ್ತು ಮೈಕ್ಅನ್ನು ಧ್ವಂಸಗೊಳಿಸಿದ್ದರು. ಬಿಜೆಪಿಯ ಅಮಿತ್ ನಾಗ್ಪಾಲ್ ಎಂಬವರು ಮತಪತ್ರವನ್ನು ಹರಿದು ಮತಪೆಟ್ಟಿಗೆಯನ್ನು ಎಸೆದಿದ್ದಾರೆ. ರೇಖಾ ಅವರು ಸೇರಿದಂತೆ ಬಿಜೆಪಿಗರು ಗೂಂಡಾಗಿರಿ ಮೆರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಎನ್‌ಐ ವರದಿಗಳ ಪ್ರಕಾರ, ಈ ಘಟನೆಯ ಸಂದರ್ಭದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳು ಜಗಳವಾಡಿಕೊಂಡಿದ್ದರು. ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗಾಗಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ಗದ್ದಲದಿಂದಾಗಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನವನ್ನು ಮುಂದೂಡಿತ್ತು.

ಘಟನೆಯ ವಿಡಿಯೋವನ್ನು ಆ ಸಂದರ್ಭದಲ್ಲಿ ಹಂಚಿಕೊಂಡಿದ್ದ ಎಎಪಿ, “ಸೋಲಿನ ಹತಾಶೆಯಿಂದ ರೇಖಾ ಗುಪ್ತಾ ಪಾಲಿಕೆಯೊಳಗೆ ಗೂಂಡಾಗಿರಿ ನಡೆಸಿದ್ದಾರೆ” ಎಂದು ಆರೋಪಿಸಿತ್ತು.

“ಬಿಜೆಪಿ ಮೇಯರ್ ಅಭ್ಯರ್ಥಿ ರೇಖಾ ಗುಪ್ತ ಅವರ ಸೋಲಿನ ನಂತರ ಅವರ ಹತಾಶೆಯನ್ನು ನೋಡಿ. ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ, ರಾತ್ರಿಯಿಡೀ ಸದನದಲ್ಲಿ ಗದ್ದಲ ನಡೆಯಿತು. ಧ್ವಂಸಗೊಳಿಸಲಾಯಿತು. ಹಲ್ಲೆ ಮತ್ತು ಗೂಂಡಾಗಿರಿ ಮತ್ತು ಸ್ಥಾಯಿ ಸಮಿತಿಯ ಚುನಾವಣೆ ನಡೆಯಲು ಅವಕಾಶ ನೀಡಲಾಗಿಲ್ಲ.” ಎಂದು ಎಎಪಿ 2023ರಲ್ಲಿ ಟ್ವೀಟ್ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...