ಇಡಿ ಬಂಧನದ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಿಂದ ವಾಪಸ್ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

Date:

ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಪಸ್‌ ಪಡೆದಿದ್ದಾರೆ.

ಮಾಧ್ಯಮಗಳ ವರದಿಯಂತೆ ಬಂಧನದ ವಿರುದ್ಧದ ತಮ್ಮ ಅರ್ಜಿಯನ್ನು ಕೆಳ ಹಂತದ ರೋಸ್‌ ಅವಿನ್ಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದಾರೆ ಎನ್ನಲಾಗಿದೆ.

ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಕೇಜ್ರಿವಾಲ್ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾಗಿ ಕೆಳ ಹಂತದ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಘರ್ಷಣೆಯುಂಟಾಗುವ ಸಾಧ್ಯತೆಯಿರುವುದರಿಂದ ಅರ್ಜಿಯನ್ನು ವಾಪಸ್‌ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2021-22ರ ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾ.21ರಂದು ರಾತ್ರಿ ಕೇಜ್ರಿವಾಲ್‌ ಅವರನ್ನು ಬಂಧಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಉತ್ತರಕ್ಕೆ ಬೆಂಕಿ ಹಚ್ಚದಿರಲಿ ಶೋಭಾ ಕರಂದ್ಲಾಜೆ

ದೆಹಲಿ ಮುಖ್ಯಮಂತ್ರಿ ಬಂಧನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದೆಹಲಿ ಸಂಪುಟ ಸಚಿವರಾದ ಅತೀಶಿ ಹಾಗೂ ಸೌರಭ್ ಬಾರದ್ವಜ್‌ ಒಳಗೊಂಡ ಎಎಪಿ ನಾಯಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಇಂದು ವಶಕ್ಕೆ ತೆಗೆದುಕೊಂಡರು.

ಈ ನಡುವೆ ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮಾ.22) ಜಾರಿ ನಿರ್ದೇಶನಾಲಯದಿಂದ ಬಂಧನದ ವಿರುದ್ಧ ಇಂದು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಒಪ್ಪಿಗೆ ಸೂಚಿಸಿತ್ತು.

ಮೂಲಗಳ ಪ್ರಕಾರ ಸ್ವಾತಂತ್ರ್ಯ ನಂತರದಲ್ಲಿ ಮುಖ್ಯಮಂತ್ರಿಯೊಬ್ಬರು ಅಧಿಕಾರದಲ್ಲಿದ್ದಾಗಲೇ ಬಂಧನಕ್ಕೊಳಗಾಗಿರುವುದು ಇದೇ ಮೊದಲ ಪ್ರಕರಣವಾಗಿದೆ.

ದೆಹಲಿ ಮುಖ್ಯಮಂತ್ರಿ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಕೇಜ್ರಿವಾಲ್‌ ಬಂಧನವನ್ನು ವಿರೋಧಿಸಿ ಎಎಪಿ ದೇಶಾದ್ಯಂತ ಪ್ರತಿಭಟನೆ ಕರೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...