ಸಂಸ್ಕೃತ ಭಾರತದ ಮಾತೃಭಾಷೆ, ನಾಸಾ ಕೂಡ ಪ್ರಬಂಧ ಮಂಡಿಸಿದೆ ಎಂದ ದೆಹಲಿ ಸಿಎಂ

Date:

ಸಂಸ್ಕೃತ ಅತ್ಯಂತ ವೈಜ್ಞಾನಿಕ ಭಾಷೆಯಾಗಿದ್ದು, ಕಂಪ್ಯೂಟರ್‌ ಸ್ನೇಹಿಯಾಗಿದೆ. ನಾಸಾ ವಿಜ್ಞಾನಿಗಳು ಕೂಡ ಭಾಷೆಯ ಕೋಡಿಂಗ್ ಮತ್ತು ಇತರ ವೈಜ್ಞಾನಿಕ ಕಾರ್ಯಗಳಿಗೆ ಪ್ರಾಚೀನ ಭಾರತೀಯ ಭಾಷೆಯ ಸಾಮರ್ಥ್ಯವನ್ನು ಗುರುತಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಶರ್ಮಾ ತಿಳಿಸಿದ್ದಾರೆ.

ದೆಹಲಿಯ ಸಂಸ್ಕೃತ ಭಾಷಾ ಕಲಿಕೆಯ ಉಪಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಭವ್ಯ ಇತಿಹಾಸವನ್ನು ಇದರಲ್ಲಿ ಬರೆಯಲಾಗಿದೆ. ನಮ್ಮ ಸಂಸ್ಕೃತಿಯನ್ನು ಇದರಲ್ಲಿ ದಾಖಲಿಸಲಾಗಿದೆ. ವಿಶ್ವದಾದ್ಯಂತ 60 ವಿವಿಗಳಲ್ಲಿ ಈ ಭಾಷೆಯನ್ನು ಹೇಳಿಕೊಡುತ್ತಾರೆ. ನಾಸಾ ವಿಜ್ಞಾನಿಗಳು ಕೂಡ ಸಂಸ್ಕೃತದ ಬಗ್ಗೆ ಸಂಶೋಧನಾ ಪ್ರಬಂಧ ಬರೆದಿದ್ದಾರೆ. ಇದು ಕೋಡಿಂಗ್‌ ಹಾಗೂ ಕಮಾಂಡ್‌ಗಳನ್ನು ಬೆಂಬಲಿಸುತ್ತದೆ ಎಂಬುದನ್ನು ನಾನು ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಸಂಸ್ಕೃತವು ಭಾರತದ ಸಂಸ್ಕೃತಿ ಹಾಗೂ ಹಲವು ಭಾಷೆಗಳ ಆಧಾರಸ್ತಂಭವಾಗಿದೆ. ದೇಶದಾದ್ಯಂತ ಈ ಭಾಷೆಯನ್ನು ಮಾತನಾಡುತ್ತಾರೆ. ಪ್ರತಿಯೊಂದು ರಾಜ್ಯವು ಮಾತೃಭಾಷೆ ಹೊಂದಿದೆ. ಆದರೆ ವಾಸ್ತವವೇನೆಂದರೆ ಸಂಸ್ಕೃತ ನಮ್ಮ ಮಾತೃಭಾಷೆಯಾಗಿದ್ದು, ಪ್ರತಿಯೊಂದು ಭಾಷೆಯು ಅದರಿಂದ ಹುಟ್ಟಿಕೊಂಡಿದೆ. ಹಿಂದಿ, ಮರಾಠಿ, ಬಂಗಾಳಿ, ಸಿಂಧಿ, ಮಲಯಾಳಂ ಎಲ್ಲ ಸಂಸ್ಕೃತದ ಅಂಗಗಳು ಎಂದು ರೇಖಾ ಗುಪ್ತಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಹಾಸ್ ಶೆಟ್ಟಿ ಸಾವಿನಲ್ಲಿ ಬಿಜೆಪಿ ಕೆಟ್ಟ ರಾಜಕೀಯ

“ವಿಶ್ವವು ವಿಶ್ವ ಗುರುವನ್ನು ಹೊಂದಬೇಕಾದರೆ, ನಾವು ಖಂಡಿತಾ ಸಂಸ್ಕೃತದ ಮೂಲಕ ಆಳವಾದ ಜ್ಞಾನವನ್ನು ಹೊಂದಬೇಕಿದೆ. ಈ ಭಾಷೆಯಿಂದಲೇ ಹಿಂದೆ ನಮ್ಮ ವಿಜ್ಞಾನ, ವ್ಯವಹಾರ ಹಾಗೂ ಸಂಸ್ಖೃತಿ ನಡೆಯುತ್ತಿತ್ತು ಎಂದು ದೆಹಲಿ ಸಿಎಂ ಹೇಳಿದರು.

ನಮ್ಮ ಮಕ್ಕಳು ಫ್ರೆಂಚ್, ಜರ್ಮನ್ ಅಥವಾ ಇಂಗ್ಲಿಷ್ ಮಾತನಾಡಿದರೆ, ನಾವು ಆ ಮಗುವನ್ನು ತುಂಬಾ ಪ್ರತಿಭಾನ್ವಿತ ಎಂದು ಪರಿಗಣಿಸಿ ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಆದರೆ ಒಂದು ಮಗು ಸಂಸ್ಕೃತದಲ್ಲಿ ಅದೇ ನಿರರ್ಗಳವಾಗಿ ಮಾತನಾಡಿದಾಗ, ಅದನ್ನು ದೊಡ್ಡ ವಿಷಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...