ದೆಹಲಿ | ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಬೂಟು ಕಾಲಿನಿಂದ ಒದ್ದ ಪೊಲೀಸ್; ವಿಡಿಯೋ ವೈರಲ್

Date:

ಶುಕ್ರವಾರದ ಪ್ರಾರ್ಥನೆಯ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮಸೀದಿಯೊಂದರ ಬಳಿಯಲ್ಲಿರುವ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಬೂಟು ಕಾಲಿನಿಂದ ಒದ್ದ ಘಟನೆ ನಡೆದಿದೆ.

ಘಟನೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯು ದೆಹಲಿಯ ಇಂದರ್ಲೋಕ್ ಪ್ರದೇಶದಲ್ಲಿರುವ ಮಸೀದಿ ಸಮೀಪ ನಡೆದಿರುವುದಾಗಿ ವರದಿಯಾಗಿದೆ.

ಪೊಲೀಸ್ ಅಧಿಕಾರಿ ಸ್ಥಳಕ್ಕೆ ಬಂದಾಗ ಜನರ ಗುಂಪು ರಸ್ತೆಯಲ್ಲಿ ಬಟ್ಟೆ ಹಾಕಿ, ನಮಾಝ್ ಮಾಡುತ್ತಿದ್ದರು. ಈ ವೇಳೆ ಅವರನ್ನು ಎದ್ದೇಳಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿ ಬೂಟು ಕಾಲಿನಿಂದ ಒದ್ದಿದ್ದಾರೆ. ಇದಾದ ಕೂಡಲೇ ಅಲ್ಲಿದ್ದ ಮಂದಿ ಆಕ್ಷೇಪ ಎತ್ತಿದ್ದು, ಕಾನ್‌ಸ್ಟೆಬಲ್ ಮತ್ತು ಗುಂಪಿನ ನಡುವೆ ತೀವ್ರ ಮಾತಿನ ಚಕಮಕಿ ಕೂಡ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಡಿಯೋ ವೈರಲಾಗುತ್ತಿದ್ದಂತೆಯೇ ಎಚ್ಚೆತ್ತಿರುವ ಪೊಲೀಸ್ ಅಧಿಕಾರಿಗಳು, ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಉತ್ತರ ವಿಭಾಗದ ಡಿಸಿಪಿ, “ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ. ಇಂದರ್ಲೋಕ್ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ರಸ್ತೆಯಲ್ಲಿ ಗಂಟೆಗಳಿಗಿಂತಲೂ ಹೆಚ್ಚಾಗಿ ಡಿಜೆ ಹಾಕಿ ಕುಣಿಯುವವರ ಬಗ್ಗೆ ನೋಡಿಯೂ ಕೂಡ ಕ್ರಮ ಕೈಗೊಳ್ಳಲು ಹಿಂಜರಿಯುವ ಪೊಲೀಸರು, ಮುಸ್ಲಿಮರ ಶುಕ್ರವಾರದ ಪ್ರಾರ್ಥನೆಯ ಕೆಲವು ನಿಮಿಷಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲವೇ? ಇದು ದೇಶದಲ್ಲಿ ಮುಸ್ಲಿಮರ ವಿರುದ್ಧ ಹರಡಲಾಗುತ್ತಿರುವ ದ್ವೇಷದ ಇನ್ನೊಂದು ರೂಪವಷ್ಟೇ. ಇದು ಖಂಡನೀಯ” ಎಂದು ಪೋಸ್ಟ್ ಹಾಕುತ್ತಿದ್ದಾರೆ.

ಈ ನಡುವೆ ಸಂಘಪರಿವಾರ ಹಾಗೂ ಬಲಪಂಥೀಯ ಬೆಂಬಲಿಗರು, ರಸ್ತೆಯಲ್ಲಿ ನಮಾಝ್ ಮಾಡಲು ನಿಮಗೆ ಅವಕಾಶ ಕೊಟ್ಟವರಾರು. ಪೊಲೀಸ್ ಏನು ಮಾಡಬೇಕೋ ಅದನ್ನೇ ಮಾಡಿದ್ದಾನೆ ಎಂದು ಹೇಳುವ ಮೂಲಕ ಪೊಲೀಸ್ ಸಿಬ್ಬಂದಿಯ ಪರವಾಗಿ ಪೋಸ್ಟ್ ಹಾಕುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...