ಸುಪ್ರೀಂ ಕೋರ್ಟ್‌ನಿಂದಲೂ ಕೇಜ್ರಿವಾಲ್‌ಗೆ ಸಿಗದ ಜಾಮೀನು!

Date:

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸುಪ್ರೀಂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಇಂದು ಜಾಮೀನು ನೀಡಲಿಲ್ಲ. ವಿಚಾರಣೆಯನ್ನು ಕೋರ್ಟ್ ನಾಳೆ ಅಥವಾ ಮುಂದಿನ ವಾರ ಕೈಗೊಳ್ಳಲಿದೆ.

ಗೋವಾ ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ ಅವರು 7 ಸ್ಟಾರ್ ಹೋಟೆಲ್‌ನಲ್ಲಿ ತಂಗಿದ್ದು, ಈ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದೆಂದು ಜಾರಿ ನಿರ್ದೇಶನಾಲಯ ಪರ ಹಾಜರಿದ್ದ ಹೆಚ್ಚುವರಿ ಸಾಲಿಟರ್‌ ಜನರಲ್‌ ಎಸ್‌ ವಿ ರಾಜು ಅವರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ಪೀಠವು, ಕೇಜ್ರಿವಾಲ್‌ ಅವರು ಚುನಾಯಿತ ನಾಯಕನಾಗಿದ್ದು, ಲೋಕಸಭೆಯಲ್ಲಿ ಪ್ರಚಾರ ಮಾಡಲು ಜಮೀನು ಅಗತ್ಯವಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ದೆಹಲಿ ಹೈಕೋರ್ಟ್, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 20ರವರೆಗೂ ವಿಸ್ತರಿಸಿದೆ.

ಇಂದಿಗೆ ಕೇಜ್ರಿವಾಲ್‌ ಅವರ ನ್ಯಾಯಾಂಗದ ಅವಧಿ ಕೊನೆಗೊಂಡ ಕಾರಣ ವಿಶೇಷ ನ್ಯಾಯಾಧೀಶರಾದ ಕಾವೇರಿ ಬೇವಾಜ ಅವರು ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಅವರು ಜಾರಿ ನಿರ್ದೇಶನಾಲಯದಿಂದ  ಮಾರ್ಚ್‌ 21 ರಂದು ಬಂಧನಕ್ಕೊಳಗಾಗಿದ್ದು, ಏ.1 ರಿಂದ ತಿಹಾರ್‌ ಸೆರೆಮನೆಯಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ತಮ್ಮ ಬಂಧನದ ಆದೇಶ ಪ್ರಶ್ನಿಸಿ ಜಾಮೀನಿಗಾಗಿ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಇಂದು ವಿಚಾರಣೆ ನಡೆಯುತ್ತಿದೆ.

ದೆಹಲಿ ಅಬಕಾರಿ ಹಗರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸಂಜಯ್‌ ಸಿಂಗ್‌ ಕೂಡ ಆರೋಪಿಗಳಾಗಿದ್ದು, ಸಂಜಯ್‌ ಸಿಂಗ್‌ ಜಾಮೀನು ಪಡೆದುಕೊಂಡಿದ್ದರೆ, ಮನೀಶ್ ಸಿಸೋಡಿಯಾ ಇನ್ನೂ ಸೆರೆಮನೆಯಲ್ಲಿದ್ದಾರೆ.

ಈ ನಡುವೆ ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನ್‌ ಗುಂಪಿನ ‘ಸಿಖ್ಖರಿಗೆ ನ್ಯಾಯ’ ಚಳುವಳಿಯ ಸಂಘಟನೆಯಿಂದ ಹಣಕಾಸು ನೆರವು ಸ್ವೀಕರಿಸಿದ ಸಿಎಂ ಅರವಿಂದ್‌ ಕೇಜ್ರಿವಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶಿಫಾರಸ್ಸು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...