ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಬಿಜೆಪಿಯ ಬ್ರಿಜ್ ಭೂಷಣ್ ವಿರುದ್ಧ ದೋಷಾರೋಪ ದಾಖಲಿಸಿದ ಕೋರ್ಟ್‌

Date:

ಐವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೆಹಲಿ ನ್ಯಾಯಾಲಯವು ದೋಷಾರೋಪ ಪಟ್ಟಿ ದಾಖಲಿಸಿಕೊಂಡಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿದೆ. ಬ್ರಿಜ್ ಭೂಷಣ್ ವಿರುದ್ಧ ಆರೋಪ ಹೊರಿಸಲು ಸಾಕಷ್ಟು ಅಂಶಗಳನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಧೀಶೆ ಪ್ರಿಯಾಂಕಾ ರಾಜ್‌ಪೂತ್ ಕಂಡುಕೊಂಡಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೈಂಗಿಕ ಕಿರುಕುಳಕ್ಕೊಳಗಾದ ಪ್ರತಿಯೊಬ್ಬ ಸಂತ್ರಸ್ತೆಯರಿಗೆ ಸಂಬಂಧಿಸಿದಂತೆ 354 ಮತ್ತು 354ಎ ಅಡಿಯಲ್ಲಿ ಬ್ರಿಜ್ ಭೂಷಣ್ ವಿರುದ್ಧ ಆರೋಪಗಳನ್ನು ದಾಖಲಿಸಿಕೊಳ್ಳಲಾಗಿದೆ” ಎಂದು ನ್ಯಾಯಾಲಯವು ತಿಳಿಸಿದೆ. ಆದರೆ, ಆರನೇ ಕುಸ್ತಿಪಟು ಮಾಡಿದ ಆರೋಪಗಳಿಂದ ಬ್ರಿಜ್ ಭೂಷಣ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿರುವುದಾಗಿ ವರದಿ ತಿಳಿಸಿದೆ.

ಬ್ರಿಜ್ ಭೂಷಣ್‌ಗೆ ಲೋಕಸಭಾ ಚುನಾವಣೆಯ ಟಿಕೆಟ್ ನಿರಾಕರಿಸಿದ್ದ ಬಿಜೆಪಿ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ಗೆ ಉತ್ತರ ಪ್ರದೇಶದ ಕೈಸರ್‌ಜಂಗ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿತ್ತು.

ಬ್ರಿಜ್ ಭೂಷಣ್ ಬದಲಿಗೆ ಈತನ ಪುತ್ರ ಕರಣ್‌ ಭೂಷಣ್‌ ಸಿಂಗ್‌ಗೆ ಟಿಕೆಟ್ ನೀಡಲಾಗಿತ್ತು. 2019ರವರೆಗೆ ಕಳೆದ ಮೂರು ಬಾರಿ ಕೈಸರ್‌ಜಂಗ್‌ ಕ್ಷೇತ್ರದಿಂದ ಬ್ರಿಜ್‌ ಭೂಷಣ್‌ ಸಿಂಗ್‌ಗೆ ಟಿಕೆಟ್ ನೀಡಲಾಗಿತ್ತು. ಮೂರು ಬಾರಿಯೂ ಬ್ರಿಜ್‌ ಭೂಷಣ್ ಆಯ್ಕೆಯಾಗಿದ್ದ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...