ದೆಹಲಿ ಗಲಭೆ ಪ್ರಕರಣ: ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

Date:

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಶಾರ್ಜೀಲ್ ಇಮಾಮ್ ಅವರಿಗೆ ತಮ್ಮ ಸಹೋದರನ ಮದುವೆಯಲ್ಲಿ ಭಾಗಿಯಾಗಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ದೆಹಲಿ ನ್ಯಾಯಾಲಯವು ಸೋಮವಾರ 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕರ್ಕಾರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪೈ ಅವರು ಮಾರ್ಚ್ 20ರಿಂದ ಮಾರ್ಚ್ 30ರವರೆಗೆ ಇಮಾಮ್‌ಗೆ ಮಧ್ಯಂತರ ಜಾಮೀನು ನೀಡಿದ್ದಾರೆ. ಜಾಮೀನಿನಲ್ಲಿರುವಾಗ, ಇಮಾಮ್ ಮಾಧ್ಯಮಗಳನ್ನು ಸಂಪರ್ಕಿಸಬಾರದು ಅಥವಾ ಸಾಮಾಜಿಕ ಮಾಧ್ಯಮವನ್ನು ಬಳಸಬಾರದು ಎಂದೂ ಕೋರ್ಟ್ ಸೂಚನೆ ನೀಡಿದೆ. ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಮಾತ್ರ ಸಂವಹನ ನಡೆಸುವಂತೆ ನಿರ್ದೇಶಿಸಿದೆ.

ಇದನ್ನು ಓದಿದ್ದೀರಾ? ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಕಾರ: ಸುಪ್ರೀಂ ಕೋರ್ಟ್ ವಕೀಲರ ತಕರಾರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೆಫ್ಟಿನೆಂಟ್ ಕೌನ್ಸೆಲ್ ಉಲ್ಲೇಖಿಸಿರುವ ಮತ್ತು ಪ್ರಾಸಿಕ್ಯೂಷನ್ ಪರಿಶೀಲಿಸಿದ ಸಂಗತಿಗಳನ್ನು ಪರಿಗಣಿಸಿ, ಅರ್ಜಿದಾರರಿಗೆ ಮಾರ್ಚ್ 20ರಿಂದ 30ವರೆಗೆ ₹50,000/- ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಇಬ್ಬರು ಶ್ಯೂರಿಟಿಗಳ ಆಧಾರದಲ್ಲಿ ಮಧ್ಯಂತರ ಜಾಮೀನು ನೀಡುವುದು ಸೂಕ್ತವೆಂದು ಪರಿಗಣಿಸಲಾಗುತ್ತದೆ” ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.

2020ರ ಜನವರಿಯಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ಮಾಡಿದ ಭಾಷಣದ ಕಾರಣಕ್ಕಾಗಿ ಇಮಾಮ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಬಂಧಿತರಾಗಿರುವ ಇಮಾಮ್ ಕಳೆದ ಐದು ವರ್ಷಗಳಿಂದ ಜೈಲಿನಲ್ಲಿದ್ದಾರೆ. 2025ರ ಸೆಪ್ಟೆಂಬರ್‌ 2ರಂದು ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದು, ಸುಪ್ರೀಂ ಕೋರ್ಟ್ 2026ರ ಜನವರಿ 5ರಂದು ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

ಇದನ್ನು ಓದಿದ್ದೀರಾ? ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ

ಉಮರ್ ಖಾಲಿದ್, ಇಮಾಮ್‌ಗೆ ಜಾಮೀನು ನಿರಾಕರಿಸಿರುವ ಕ್ರಮವನ್ನು ವಿವಿಧ ರಾಜಕೀಯ ಪಕ್ಷಗಳು, ಕಾನೂನು ತಜ್ಞರು ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರರು ತೀವ್ರವಾಗಿ ವಿರೋಧಿಸಿದ್ದಾರೆ. ಈ ನಾಯಕರುಗಳನ್ನು ಐದು ವರ್ಷಗಳಿಂದ ವಿಚಾರಣೆಯಿಲ್ಲದೆಯೇ ಜೈಲಿನಲ್ಲಿ ಇರಿಸಿರುವುದನ್ನು ನಾಯಕರುಗಳು ವಿರೋಧಿಸಿದ್ದಾರೆ. ಇದು ಸಂವಿಧಾನದ 21ನೇ ವಿಧಿಯ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆ ಎಂದು ವಾದಿಸಿದ್ದಾರೆ.

ಅಷ್ಟು ಮಾತ್ರವಲ್ಲದೆ ಅತ್ಯಾಚಾರದಂತಹ ಗಂಭೀರ ಅಪರಾಧಗಳಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ ರಾಮ್ ರಹೀಂ ಅಂತಹವರಿಗೆ ಪದೇ ಪದೇ ಪೆರೋಲ್ ನೀಡಲಾಗುತ್ತಿದೆ. ಆದರೆ ಆದರೆ ವಿಚಾರಣೆಯನ್ನೇ ಎದುರಿಸದ ಕಾರ್ಯಕರ್ತರಿಗೆ ಜಾಮೀನು ನಿರಾಕರಿಸಲಾಗುತ್ತಿರುವುದನ್ನು ವಿಪಕ್ಷ ನಾಯಕರುಗಳು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...