ಅಬಕಾರಿ ನೀತಿ ಹಗರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾ.28ರವರೆಗೆ ED ಕಸ್ಟಡಿಗೆ

Date:

ಅಬರಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿ ದೆಹಲಿ ನ್ಯಾಯಾಲಯವು ಆದೇಶ ನೀಡಿದೆ. ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ವಿಚಾರಣೆಗಾಗಿ 10 ದಿನಗಳ ಕಸ್ಟಡಿಗೆ ನೀಡುವಂತೆ ಕೋರಿದ್ದರು.

ಮನವಿಯ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರು, 10 ದಿನಗಳ ಬದಲಾಗಿ ಆರು ದಿನಗಳವರೆಗೆ ಇಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಮಾರ್ಚ್ 28 ರಂದು ಮಧ್ಯಾಹ್ನ 2 ಗಂಟೆಗೆ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯವು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಇಡಿ ಅಧಿಕಾರಿಗಳು ಗುರುವಾರ ಸಂಜೆ ಬಂಧಿಸಿದ್ದರು.

ಇದನ್ನು ಓದಿದ್ದೀರಾ? ಜಗ್ಗಿ ವಾಸುದೇವ್ ಆಶ್ರಮದಿಂದ 6 ಮಂದಿ ನಾಪತ್ತೆ: ಹೈಕೋರ್ಟ್‌ಗೆ ತಮಿಳುನಾಡು ಪೊಲೀಸರ ಮಾಹಿತಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದರು.

ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇಡಿ ಹಾಜರುಪಡಿಸಿದಾಗ ಅವರ ರಿಮಾಂಡ್‌ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಇದನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...