ಲೈಂಗಿಕ ದೌರ್ಜನ್ಯ ಪ್ರಕರಣ | ಜು. 18ರಂದು ಹಾಜರಾಗಲು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಸಮನ್ಸ್ ಜಾರಿ

Date:

  • ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಎರಡು ಪ್ರಕರಣ ದಾಖಲು
  • ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕುಸ್ತಿಪಟುಗಳು

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರಿಗೆ ದೆಹಲಿ ರೋಸ್‌ ಅವೆನ್ಯೂ ನ್ಯಾಯಾಲಯ ಶುಕ್ರವಾರ (ಜುಲೈ 7) ಸಮನ್ಸ್‌ ಜಾರಿ ಮಾಡಿದೆ.

ಆರೋಪಿ ವಿರುದ್ಧ ವಿಚಾರಣೆ ನಡೆಸಲು ಸೂಕ್ತ ದಾಖಲೆಗಳಿವೆ. ಅದಕ್ಕಾಗಿ ಬ್ರಿಜ್‌ ಭೂಷಣ್‌ ಅವರು ಜುಲೈ 18 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ಸೂಚಿಸಿದೆ.

ಬ್ರಿಜ್‌ ಭೂಷಣ್‌ ಅವರ ವಿರುದ್ಧ ಮಹಿಳಾ ಕುಸ್ತಿಪಟುಗಳು ದೂರು ನೀಡಿ ಪ್ರತಿಭಟನೆ ನಡೆಸಿದ ನಂತರ ದೆಹಲಿ ಪೊಲೀಸರು ಜೂನ್ 15 ರಂದು ಲೈಂಗಿಕ ಕಿರುಕುಳ, ಕ್ರಿಮಿನಲ್‌ ಬೆದರಿಕೆ ಹಾಗೂ ಹಿಂಸೆಯ ಆರೋಪದಲ್ಲಿ ಬ್ರಿಜ್‌ ಭೂಷಣ್‌ ಅವರ ವಿರುದ್ಧ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪ್ರಾಪ್ತ ಮಹಿಳಾ ಕುಸ್ತಿಪಟುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬ್ರಿಜ್‌ ಭೂಷಣ್‌ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಬ್ರಿಜ್‌ ಭೂಷಣ್ ವಿರುದ್ಧ ಆರೋಪಿಸಿದ ಏಳು ಮಹಿಳಾ ಕುಸ್ತಿಪಟುಗಳ ಪೈಕಿ ಅಪ್ತಾಪ್ತೆಯೂ ಸೇರಿದ್ದಾರೆ.

ಆದರೆ ಬ್ರಿಜ್‌ ಭೂಷಣ್‌ ತಮ್ಮ ವಿರುದ್ಧದ ಲೈಂಗಿಕ ಕಿರುಕುಳ ಆರೋಪವನ್ನು ಅಲ್ಲಗಳೆದಿದ್ದರು. ತಮ್ಮ ವಿರುದ್ಧದ ಆರೋಪ ಸಾಬೀತಾದಲ್ಲಿ ತಾವು ಜೈಲಿಗೆ ಹೋಗಲು ಸಿದ್ಧ ಎಂದು ಬ್ರಿಜ್‌ ಭೂಷಣ್‌ ಹೇಳಿದ್ದರು.

ಬ್ರಿಜ್‌ ಭೂಷಣ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒಲಿಂಪಿಕ್‌ ಮತ್ತು ಏಷಿಯನ್‌ ಗೇಮ್ಸ್‌ನಲ್ಲಿ ಪದಕ ವಿಜೇತ ಪುರುಷರು ಸೇರಿ ಮಹಿಳಾ ಕುಸ್ತಿಪಟುಗಳು ಜನವರಿಯಲ್ಲಿ ಪ್ರತಿಭಟಿಸಿದ್ದರು.

ಈ ಸುದ್ದಿ ಓದಿದ್ದೀರಾ? ಜು.14ಕ್ಕೆ ಚಂದ್ರಯಾನ-3 ಉಡಾವಣೆ : ಇಸ್ರೋ

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿ ಜಂತರ್ ಮಂತರ್‌ನಲ್ಲಿ ಏಪ್ರಿಲ್‌ನಿಂದ ಪ್ರತಿಭಟನೆ ನಡೆಸಿದ್ದರು. ಸ್ಥಳವನ್ನು ತೆರವುಗೊಳಿಸುವಂತೆ ಪೊಲೀಸರು ಕೆಲವು ಕುಸ್ತಿಪಟುಗಳನ್ನು ವಶಕ್ಕೆ ಪಡೆದಿದ್ದರು.

ಪೊಲೀಸರು ಕುಸ್ತಿಪಟುಗಳನ್ನು ಬಸ್ಸಿನಲ್ಲಿ ಕರೆದೊಯ್ಯಲು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಕಳೆದ ತಿಂಗಳು ಕುಸ್ತಿಪಟುಗಳು ಪ್ರತಿಭಟನೆ ನಿಲ್ಲಿಸಿ ಕೆಲಸಕ್ಕೆ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...