2 ಕ್ಷೇತ್ರಗಳಲ್ಲಿ ಮತದಾರ ಹೆಸರು ನೋಂದಣಿ: ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್‌ಗೆ ಕೋರ್ಟ್ ಸಮನ್ಸ್

Date:

ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿ ಎರಡು ವಿಭಿನ್ನ ಕ್ಷೇತ್ರಗಳ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಹೆಸರು ದಾಖಲಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

“ಆರೋಪಿಯಾಗಿರುವ ಅರವಿಂದ್‌ ಕೇಜ್ರಿವಾಲ್‌ ಪತ್ನಿ ಸುನೀತಾ ಕೇಜ್ರಿವಾಲ್ ಅವರ ವಿರುದ್ಧ ಪ್ರಾಥಮಿಕ ಹಂತದ ಪ್ರಕರಣವನ್ನು ದಾಖಲಿಸಲು ಈ ನ್ಯಾಯಾಲಯವು ಪರಿಗಣಿಸಿದೆ“ ಎಂದು ಕಳೆದ ವಾರ ನೀಡಿದ ಆದೇಶದಲ್ಲಿ ತೀಸ್ ಹಜಾರಿ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ತಿಳಿಸಿದ್ದಾರೆ.

ಇಬ್ಬರು ಸಾಕ್ಷಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ಮತದಾರರ ಪಟ್ಟಿಗಳ ಪ್ರಕಾರ, ಸುನೀತಾ ಕೇಜ್ರಿವಾಲ್ ಅವರ ಹೆಸರು ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರ ಮತ್ತು ಉತ್ತರ ಪ್ರದೇಶದ ಸಾಹಿಬಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. ಪ್ರಕರಣದ ದೂರುದಾರರಾಗಿರುವ ದೆಹಲಿ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ ಕೂಡ ನ್ಯಾಯಾಲಯದಲ್ಲಿ ಈ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಭಾರತ್‌ ಮಾತಾ ಕೀ ಜೈ’ ಎಂದ ಅಮಿತಾಭ್ ಬಚ್ಚನ್; ನೆಟ್ಟಿಗರಿಂದ ತರಾಟೆ

“ನಾನು ಈ ದೂರನ್ನು 2019 ರಲ್ಲಿ ಸಲ್ಲಿಸಿದ್ದೆ. ದೆಹಲಿಯ ಚಾಂದಿನಿ ಚೌಕ್ ಮತ್ತು ಗಾಜಿಯಾಬಾದ್‌ನ ಸಾಹಿಬಾಬಾದ್‌ನಲ್ಲಿ ಮತದಾರರಾಗಿ ನೋಂದಾಯಿಸಿರುವುದು ಕಾನೂನುಬಾಹಿರವಾಗಿದೆ” ಎಂದು ಖುರಾನಾ ತಿಳಿಸಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿ ಇಬ್ಬರೂ ಐಆರ್‌ಎಸ್‌ ಅಧಿಕಾರಿಗಳಾಗಿದ್ದರು. ದೇಶದಲ್ಲಿ ಒಂದು ರಾಷ್ಟ್ರ ಮತ್ತು ಒಂದು ಮತದಾರರ ಗುರುತಿನ ಚೀಟಿ ಜಾರಿಯಲ್ಲಿದೆ ಎಂದು ತಿಳಿದಿರುವ ಕಾರಣ ಅವರು ಇಂತಹ ಅಪರಾಧವನ್ನು ಮಾಡಿರುವುದು ಅಕ್ಷಮ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

1950ರ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 17ರ ಪ್ರಕಾರ, ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಗೆ ಯಾವುದೇ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲಾಗುವುದಿಲ್ಲ.

ವಿವಿಧ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಾಲಯವು ಆರೋಪಿಗಳಿಗೆ ಸಮನ್ಸ್ ನೀಡಲು ಯಾವುದೇ ‘ಸ್ಪಷ್ಟ ಕಾರಣಗಳನ್ನು’ ಹೇಳಬೇಕಾಗಿಲ್ಲ ಮತ್ತು ಸಮನ್ಸ್ ಆದೇಶವನ್ನು ರವಾನಿಸುವಾಗ ಮ್ಯಾಜಿಸ್ಟ್ರೇಟ್ ಪ್ರಾಥಮಿಕ ಆರೋಪಗಳ ಮೇಲೆ ಕೇಂದ್ರೀಕರಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...