ದೆಹಲಿ | ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಕಲ್ಲು ತೂರಾಟ, 5 ಪೊಲೀಸರಿಗೆ ಗಾಯ

Date:

ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಇಲ್ಲಿನ ತುರ್ಕಮನ್ ಗೇಟ್ ಮತ್ತು ರಾಮಲೀಲಾ ಮೈದಾನದ ಸಮೀಪವಿರುವ ಫೈಜ್-ಎ-ಇಲಾಹಿ ಮಸೀದಿ ಬಳಿ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯ ವೇಳೆ ಕಲ್ಲು ತೂರಾಟ ನಡೆದಿದ್ದು, ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

​ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಬುಧವಾರ ಮುಂಜಾನೆ 1 ಗಂಟೆ ಸುಮಾರಿಗೆ ಈ ಕಾರ್ಯಾಚರಣೆಯನ್ನು ಆರಂಭಿಸಿತು. ಹೈಕೋರ್ಟ್‌ನ ನಿರ್ದೇಶನಗಳನ್ನು ಪಾಲಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಸುಮಾರು 17 ಬುಲ್ಡೋಜರ್‌ಗಳನ್ನು ಬಳಸಲಾಗಿತ್ತು ಎನ್ನಲಾಗಿದೆ.

ಕಾರ್ಯಾಚರಣೆ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸರು ವ್ಯಾಪಕ ಬಂದೋಬಸ್ತ್ ಏರ್ಪಡಿಸಿದ್ದರು. ಒಟ್ಟು ಪ್ರದೇಶವನ್ನು ಒಂಬತ್ತು ವಲಯಗಳಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ಒಬ್ಬ ಹೆಚ್ಚುವರಿ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ, ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಉಂಟಾದ ಗೊಂದಲದಲ್ಲಿ 4-5 ಮಂದಿ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಡಿಸಿಪಿ ನಿಧಿನ್ ವಲ್ಸನ್ ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವರಾಜ ಅರಸು ದಾಖಲೆ ದಾಟಿದರೇ ಸಿದ್ದರಾಮಯ್ಯ?

​ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. “ಕೆಲವರು ಅಶಾಂತಿ ಸೃಷ್ಟಿಸಲು ಯತ್ನಿಸಿದರು. ಆದರೆ, ಕನಿಷ್ಠ ಬಲ ಪ್ರಯೋಗದ ಮೂಲಕ ಪರಿಸ್ಥಿತಿಯನ್ನು ತ್ವರಿತವಾಗಿ ಹತೋಟಿಗೆ ತರಲಾಯಿತು,” ಎಂದು ದೆಹಲಿ ಪೊಲೀಸ್ ಜಂಟಿ ಆಯುಕ್ತ (ಕೇಂದ್ರ ವಲಯ) ಮಧುರ್ ವರ್ಮಾ ತಿಳಿಸಿದ್ದಾರೆ.

ಕಾರ್ಯಾಚರಣೆಗೂ ಮುನ್ನವೇ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ಸ್ಥಳೀಯ ಅಮನ್ ಸಮಿತಿ ಹಾಗೂ ಮುಖಂಡರೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಆದರೂ ಅನಿರೀಕ್ಷಿತವಾಗಿ ಕಲ್ಲು ತೂರಾಟ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಬಾಡಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ, ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದ್ದು, ಒತ್ತುವರಿ ತೆರವು ಪ್ರಕ್ರಿಯೆ ಮುಂದುವರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...