ದೆಹಲಿ | ಮೆಟ್ರೋದಲ್ಲಿ ಬೀಡಿ ಸೇದಿದ ವೃದ್ಧ ಪ್ರಯಾಣಿಕ; ವಿಡಿಯೊ ವೈರಲ್

Date:

ನವದೆಹಲಿ ಮೆಟ್ರೋದಲ್ಲಿ ವೃದ್ಧ ಪ್ರಯಾಣಿಕನೊಬ್ಬ ಬೀಡಿ ಸೇದುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

ದೆಹಲಿ, ಬೆಂಗಳೂರು ಸೇರಿದಂತೆ ಯಾವುದೇ ಮೆಟ್ರೋದಲ್ಲಿ ಧೂಮಪಾನಕ್ಕೆ ಅವಕಾಶವಿಲ್ಲ. ಜತೆಗೆ, ಮೆಟ್ರೋದಲ್ಲಿ ಕುಳಿತು ತಿಂಡಿ-ತಿನಿಸು ತಿನ್ನುವಂತಿಲ್ಲ. ಪಾನೀಯಗಳನ್ನು ಕುಡಿಯುವಂತಿಲ್ಲ. ಸ್ವಚ್ಛತೆಯ ದೃಷ್ಟಿಯಿಂದ ಈ ನಿಯಮಗಳನ್ನು ಮಾಡಲಾಗಿದೆ. ಇನ್ನೂ ಮೊನಚಾದ ಚಾಕು, ಚೂರಿ, ಕತ್ತರಿ ಸೇರಿದಂತೆ ಇನ್ನಿತರ ಹರಿತವಾದ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಧೂಮಪಾನ, ಮದ್ಯಪಾನ, ತಂಬಾಕು ಬಳಕೆಗೆ ನಿಷೇಧವಿದೆ.

ಮೆಟ್ರೋ ನಿಲ್ದಾಣದಲ್ಲಿ ತಪಾಸಣೆ ಮಾಡುವಾಗ ಸಿಕ್ಕಿಬಿದ್ದರೆ ಬೀಡಿ, ಸಿಗರೇಟ್​ ಜಪ್ತಿ ಮಾಡಿ, ನಿಗಮ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಆದರೆ, ವೃದ್ಧನೊಬ್ಬ ನವದೆಹಲಿ ಮೆಟ್ರೋದಲ್ಲಿ ಪ್ರಯಾಣ ಮಾಡುವಾಗ ಬೀಡಿ ತೆಗೆದು, ಬೆಂಕಿ ಗೀರಿ ಸೇದಲು ಪ್ರಾರಂಭಿಸುತ್ತಾರೆ. ಈ ವೇಳೆ, ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬರು ಎದ್ದು ಹೋಗಿದ್ದಾರೆ. ಅಲ್ಲಿಯೇ ನಿಂತವರು ಒಬ್ಬರು ಬೀಡಿ ಸೇದದಂತೆ ತಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೆಟ್ರೋ ಆವರಣದೊಳಗೆ ಧೂಮಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಅದು ಶಿಕ್ಷಾರ್ಹ ಅಪರಾಧವೂ ಆಗಿದೆ. ಇದೀಗ ವೃದ್ಧನೊಬ್ಬ ಬೀಡಿ ಸೇದುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಬೀಡಿ ಸೇದಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮೆಟ್ರೋ ರೈಲು ನಿಗಮಕ್ಕೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಬಂದ್ | 13 ದೇಶೀಯ ವಿಮಾನ ಹಾರಾಟ ರದ್ದು

“ಇಂತಹ ಘಟನೆಗಳು ನಡೆದಾಗ ಸಾರ್ವಜನಿಕರು ಕೂಡಲೇ ನಮಗೆ ಮಾಹಿತಿ ನೀಡಿ. ಇದರಿಂದ ತುರ್ತು ಕ್ರಮ ಕೈಗೊಳ್ಳಬಹುದು. ಆಕ್ಷೇಪಾರ್ಹ ನಡವಳಿಕೆಗಳನ್ನು ಪತ್ತೆಹಚ್ಚಲು ಫ್ಲೈಯಿಂಗ್ ಸ್ಕ್ವಾಡ್​ಗಳನ್ನು ನೇಮಿಸಿದ್ದೇವೆ. ದೆಹಲಿ ಮೆಟ್ರೋದಲ್ಲಿ ಧೂಮಪಾನ ಮಾಡುವಂತಿಲ್ಲ. ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ದೆಹಲಿ ಮೆಟ್ರೋ ನಿಗಮ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...