ದೆಹಲಿ ಅಬಕಾರಿ ನೀತಿ ಪ್ರಕರಣ: ಖುಲಾಸೆ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲ 23 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿ ರೂಸ್‌ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ. ಇದೀಗ, ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳವು (ಸಿಬಿಐ) ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದೆ. ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ (ಭ್ರಷ್ಟಾಚಾರ ತಡೆ ಕಾಯ್ದೆ) ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಎಲ್ಲರನ್ನೂ ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. “ಪ್ರಕರಣದ ಸಾಬೀತಿಗೆ ಯಾವುದೇ ಸಾಕ್ಷ್ಯ, ಪುರಾವೆಗಳಿಲ್ಲ. ವಿಚಾರಣೆ ಮುಂದುವರಿಸಲು ಅಗತ್ಯವಿರುವ ಪ್ರಾಥಮಿಕ ಕಾನೂನು ಮಾನದಂಡಗಳನ್ನು ಪೂರೈಸಲಾಗಿಲ್ಲ” ಎಂದು ಹೇಳಿದ್ದಾರೆ.

ಈ ತೀರ್ಪು ಪ್ರಕಟವಾದ ಕೆಲವೇ ಗಂಟೆಗಳಲ್ಲಿ, ತೀರ್ಪನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...