ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 9ನೇ ಸಮನ್ಸ್

Date:

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಭಾನುವಾರ ಒಂಬತ್ತನೇ ಸಮನ್ಸ್ ಅನ್ನು ಜಾರಿಗೊಳಿಸಿದ್ದು, ಮಾರ್ಚ್ 21ರ (ಗುರುವಾರ) ಒಳಗಾಗಿ ವಿಚಾರಣೆಗೆ ಹಾಜರಾಗಲು ತಿಳಿಸಿದೆ.

ಹಲವು ಸಮನ್ಸ್‌ಗಳ ಬಳಿಕ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗದ ಕಾರಣ ಜಾರಿ ನಿರ್ದೇಶನಾಲಯ ಎರಡು ದೂರುಗಳನ್ನು ನೀಡಿದೆ. ಈ ಪ್ರಕರಣದಲ್ಲಿ ನ್ಯಾಯಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 15,000 ರೂಪಾಯಿ ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿದೆ. ಇದಾದ ಒಂದು ದಿನದ ಬಳಿಕ ಕೇಜ್ರಿವಾಲ್‌ಗೆ 9ನೇ ಸಮನ್ಸ್ ಅನ್ನು ಇ.ಡಿ ನೀಡಿದೆ.

ಶನಿವಾರ ಇ.ಡಿ ದೂರಿನ ವಿಚಾರಣೆಗಾಗಿ ರೋಸ್ ಅವೆನ್ಯೂ ಕೋರ್ಟ್‌ಗೆ ಸ್ವತಃ ಸಿಎಂ ಅರವಿಂದ್ ಕೇಜ್ರಿವಾಲ್ ಹಾಜರಾಗಿದ್ದು, ಜಾಮೀನು ಮಂಜೂರಾಗಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸಿಎಂ ಕೇಜ್ರಿವಾಲ್ ಪರ ವಕೀಲ ರಮೇಶ್ ಗುಪ್ತಾ ವಾದಿಸಿದ್ದು, “ಕೇಜ್ರಿವಾಲ್‌ಗೆ ಜಾಮೀನು ನೀಡಬೇಕು ಮತ್ತು ವಿಚಾರಣೆ ಮುಂದುವರಿಸಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಮನವಿಗೆ ಇ.ಡಿ. ಯಾವುದೇ ಅಭ್ಯಂತರವಿಲ್ಲ ಎಂದಿದ್ದು, ಕೋರ್ಟ್ ಜಾಮೀನು ನೀಡಿದೆ. ಹಾಗೆಯೇ ಕೇಜ್ರಿವಾಲ್‌ಗೆ ಸಂಬಂಧಿಸಿದ ದೂರುಗಳ ದಾಖಲೆಯನ್ನು ನೀಡಲು ಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಆದೇಶಿಸಿದೆ.

ಈ ಹಿಂದೆ ಕೇಜ್ರಿವಾಲ್ ಸಮನ್ಸ್‌ಗಳನ್ನು ‘ಕಾನೂನುಬಾಹಿರ’ ಎಂದು ಕರೆದಿದ್ದು ಯಾವುದೇ ವಿಚಾರಣೆಗೆ ಹಾಜರಾಗಿರಲಿಲ್ಲ. ಎಂಟು ಸಮನ್ಸ್‌ಗಳನ್ನು ನೀಡಿದರೂ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಇ.ಡಿ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ನೀಡಿದೆ. ಈ ದೂರಿನ ವಿಚಾರಣೆಯಲ್ಲಿ ಕೇಜ್ರಿವಾಲ್‌ಗೆ ಜಾಮೀನು ನೀಡಲಾಗಿದೆ. ಇನ್ನು ಇದೇ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಹೈದರಾಬಾದ್‌ನಲ್ಲಿ ಬಂಧಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...