ಕೋಚಿಂಗ್ ಸೆಂಟರ್‌ಗಳ ನಿಯಂತ್ರಣಕ್ಕೆ ಹೊಸ ಕಾನೂನು ಪರಿಚಯಿಸಲು ಸಜ್ಜಾದ ದೆಹಲಿ ಸರ್ಕಾರ

Date:

ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೋಚಿಂಗ್ ಸೆಂಟರ್‌ಗಳ ನಿಯಂತ್ರಣಕ್ಕೆ ಹೊಸ ಕಾನೂನನ್ನು ಪರಿಚಯಿಸಲು ದೆಹಲಿ ಸರ್ಕಾರ ಮುಂದಾಗಿದೆ.

ದೆಹಲಿ ಮೇಯರ್ ಶೆಲ್ಲಿ ಒಬೆರಾಯ್ ಜೊತೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಸಚಿವೆ ಅತಿಶಿ, “ಐಎಎಸ್ ಸ್ಟಡಿ ಸರ್ಕಲ್ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ದುರಂತದ ನಂತರ 30 ಕೋಚಿಂಗ್ ಸೆಂಟರ್‌ಗಳ ನೆಲಮಾಳಿಗೆಗಳನ್ನು ಸೀಲ್ ಮಾಡಲಾಗಿದೆ. 200 ಇನ್‌ಸ್ಟಿಟ್ಯೂಟ್‌ಗಳಿಗೆ ನೋಟಿಸ್ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.

“ನಾವು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸುತ್ತೇವೆ, ನಾವು ಅವರೊಂದಿಗೆ ಶೀಘ್ರದಲ್ಲೇ ಸಭೆ ನಡೆಸುತ್ತೇವೆ. ಅದಾದ ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳ ನಿಯಂತ್ರಣ ಕಾಯ್ದೆಯನ್ನು ತರುತ್ತೇವೆ” ಎಂದು ಶೆಲ್ಲಿ ಒಬೆರಾಯ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದೆಹಲಿ | ಮೂವರು ವಿದ್ಯಾರ್ಥಿಗಳ ಸಾವು; ಕೋಚಿಂಗ್ ಸೆಂಟರ್ ಮಾಲೀಕ, ನಿರ್ವಾಹಕ ಬಂಧನ

ಜುಲೈ 27ರಂದು ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ.

ಈ ಘಟನೆ ಬೆನ್ನಲ್ಲೇ ವಿದ್ಯಾರ್ಥಿಗಳು ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ, ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನ (ಎಂಸಿಡಿ) ಬೇಜವಾಬ್ದಾರಿಯನ್ನು ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಎಂಸಿಡಿ ಹೆಚ್ಚುವರಿ ಆಯುಕ್ತ ತಾರಿಕ್ ಥಾಮಸ್, “ನನ್ನ, ನಮ್ಮ ಅಧಿಕಾರಿಗಳ ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಬೇಕಾಗಿತ್ತು. ನಮಗೆ ಯಾವುದೇ ಕಾರಣಕ್ಕೂ ಕ್ಷಮೆಯಿಲ್ಲ” ಎಂದು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...