ಆಲ್ಟ್‌ ನ್ಯೂಸ್‌ ಪತ್ರಕರ್ತ ಝುಬೈರ್‌ಗೆ ‘ಜಿಹಾದಿ’ ಹಣೆಪಟ್ಟಿ : ಕ್ಷಮೆ ಯಾಚಿಸಲು ವ್ಯಕ್ತಿಗೆ ದೆಹಲಿ ಹೈಕೋರ್ಟ್ ಆದೇಶ

Date:

ಪತ್ರಕರ್ತ, ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್‌ ಅವರನ್ನು ʼಜಿಹಾದಿʼ ಎಂದು ಕರೆದಿದ್ದ ಜಗದೀಶ್‌ ಸಿಂಗ್‌ ಎಂಬ ವ್ಯಕ್ತಿ ತನ್ನ ಎಕ್ಸ್‌ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ದೆಹಲಿ ಹೈಕೋರ್ಟ್‌ ಆದೇಶಿಸಿರುವುದಾಗಿ ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ.

ಸಿಂಗ್‌ ಕ್ಷಮೆಯಾಚನೆ ಕನಿಷ್ಠ ಎರಡು ತಿಂಗಳುಗಳ ಕಾಲ ಖಾತೆಯಲ್ಲಿ ಪ್ರಕಟವಾಗಿರಬೇಕು ಎಂದು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರು ತಮ್ಮ ಆದೇಶದ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಝುಬೈರ್‌ ಅವರನ್ನು ಉಲ್ಲೇಖಿಸಿ, ಜಗದೀಶ್‌ ಸಿಂಗ್‌ ಎಂಬ ಬಲಪಂಥೀಯ ಬೆಂಬಲಿಗನೋರ್ವ, ʼಒಮ್ಮೆ ಜಿಹಾದಿಯಾದವನು ಸದಾ ಜಿಹಾದಿಯೇʼ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಂಗ್‌ ಕ್ಷಮೆಯಾಚಿಸಬೇಕು ಎಂದಿರುವ ನ್ಯಾಯಾಲಯ, “ಈ ಮೇಲಿನ ಹೇಳಿಕೆ ನೀಡಿದ್ದಕ್ಕಾಗಿ ವಿಷಾದಿಸುತ್ತೇನೆ. ಯಾವುದೇ ದುರುದ್ದೇಶ ಅಥವಾ ಝುಬೇರ್‌ ಅವರನ್ನು ನೋಯಿಸುವ ಇಲ್ಲವೇ ಕುಕೃತ್ಯದ ಸಲುವಾಗಿ ಇದನ್ನು ಮಾಡಿಲ್ಲ” ಎಂದು ಸಿಂಗ್‌ ಉಲ್ಲೇಖಿಸಬೇಕು ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆಯ ಸಂದರ್ಭದಲ್ಲಿ ಸಿಂಗ್ ಪ್ರಕಟಿಸಿದ ಕೆಲ ಹೇಳಿಕೆಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಭಂಭಾನಿ, ಅಂತಹ ಜನರನ್ನು ಸಾಮಾಜಿಕ ಮಾಧ್ಯಮದಿಂದ ನಿರ್ಬಂಧಿಸಬೇಕು ಎಂದು ತಿಳಿಸಿದರು. ಆದರೆ, ಝುಬೈರ್‌ ವ್ಯಕ್ತಿಯ ಕ್ಷಮೆ ಯಾಚನೆಯ ವಿವರಗಳನ್ನು ಮರು ಟ್ವೀಟ್ ಮಾಡುವಂತಿಲ್ಲ ಅಥವಾ ಇನ್ನಾವುದೇ ಸಿವಿಲ್ ಇಲ್ಲವೇ ಕ್ರಿಮಿನಲ್ ವಿಚಾರಣೆಗೆ ಅದನ್ನು ಬಳಸಿಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿತು.

ಇದನ್ನು ಓದಿದ್ದೀರಾ? ಉಡುಪಿ | ‘ಕಂಚಿನಡ್ಕ’ ಟೋಲ್‌ಗೇಟ್‌ಗೆ ಸರ್ಕಾರದಿಂದ ತಾತ್ಕಾಲಿಕ ತಡೆ : ಸಚಿವ ಜಾರಕಿಹೊಳಿ ಆದೇಶ

ವಿಚಾರಣೆಯ ಒಂದು ಹಂತದಲ್ಲಿ ನ್ಯಾಯಾಲಯ ಸಿಂಗ್‌ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು. ಸಿಂಗ್ ಅವರ ಟ್ವೀಟ್ ಸಾರ್ವಜನಿಕರಿಗೆ ಭಯ ಅಥವಾ ಆತಂಕವನ್ನು ಉಂಟು ಮಾಡುವುದಿಲ್ಲ ಮತ್ತು ಆದ್ದರಿಂದ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರನ್ನು ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...