ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ದೆಹಲಿ ವಿವಿ ನಿಷೇಧ ರದ್ದುಪಡಿಸಿದ ದೆಹಲಿ ಹೈಕೋರ್ಟ್‌

Date:

ದೆಹಲಿ ವಿವಿ ಆವರಣದಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಎನ್‌ಎಸ್‌ಯುಐ ಕಾರ್ಯದರ್ಶಿ ಲೋಕೇಶ್ ವಿರುದ್ಧದ ನಿಷೇಧ ರದ್ದುಪಡಿಸಿ ಅವರನ್ನು ವಿವಿಗೆ ಮರು ಸೇರ್ಪಡೆಗೊಳಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ

ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾತ್ರದ ಬಗ್ಗೆ ಸಿದ್ಧವಾದ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನ ವಿರೋಧಿಸಿ ದೆಹಲಿ ವಿಶ್ವವಿದ್ಯಾಲಯ ನೀಡಿದ ಆದೇಶವನ್ನು ದೆಹಲಿ ಹೈಕೋರ್ಟ್‌ ರದ್ದುಪಡಿಸಿದೆ.

ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು ದೆಹಲಿ ವಿವಿ ಆದೇಶವನ್ನು ತಿರಸ್ಕರಿಸಿದ್ದಾರೆ. ಈ ಸಂಬಂಧ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆ (ಎನ್‌ಎಸ್‌ಯುಐ) ರಾಷ್ಟ್ರೀಯ ಕಾರ್ಯದರ್ಶಿ ಲೋಕೇಶ್ ಛಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ಲೋಕೇಶ್ ಛಗ್ ಅವರನ್ನು ಡಿಬಾರ್ ಮಾಡಿದ ವಿವಿ ಆಡಳಿತದ ಆದೇಶವನ್ನೂ ನ್ಯಾಯಾಲಯ ರದ್ದುಪಡಿಸಿದೆ.

ದೆಹಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ್ದಕ್ಕಾಗಿ ಲೋಕೇಶ್ ಅವರನ್ನು ವಿವಿ ಪ್ರವೇಶಿಸದಂತೆ ವಿಶ್ವವಿದ್ಯಾಲಯ ನೋಟಿಸ್ ಕಳುಹಿಸಿತ್ತು. ಲೋಕೇಶ್ ಅವರನ್ನು ವಿಶ್ವವಿದ್ಯಾಲಯಕ್ಕೆ ಮರು ಸೇರ್ಪಡೆಗೊಳಿಸುವಂತೆ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2021 ಮಾರ್ಚ್ 10ರಂದು ವಿವಿ ನೀಡಿದ ಆದೇಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆ ಆದೇಶವನ್ನು ರದ್ದುಗೊಳಿಸಲಾಗಿದೆ. ಅರ್ಜಿದಾರನನ್ನು ಮರಳಿ ವಿವಿಗೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ಅಗತ್ಯ ಕಾನೂನು ಕ್ರಮ ಎದುರಿಸಿ” ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಜನವರಿ 27ರಂದು ಪ್ರತಿಭಟನೆ ನಡೆಸಿದ ನಂತರ ಎನ್‌ಎಸ್‌ಯುಐ ನಾಯಕನನ್ನು ಒಂದು ವರ್ಷದವರೆಗೆ ವಿವಿ ಪರೀಕ್ಷೆಗೆ ಹಾಜರಾಗದಂತೆ ಆದೇಶಿಸಲಾಗಿತ್ತು. ಪ್ರತಿಭಟನೆಯ ಸಂದರ್ಭದಲ್ಲಿ, ‘ಇಂಡಿಯಾ: ದ ಮೋದಿ ಕ್ವೆಶ್ಚನ್‌’ ಎಂಬ ಬಿಬಿಸಿ ಸಾಕ್ಷ್ಯಚಿತ್ರವನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗಿತ್ತು ಎಂದು ವಿವಿ ಆಡಳಿತ ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ?: ರಾಮನವಮಿ ಹಿಂಸೆಯ ಎನ್‌ಐಎ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌

“ಲೋಕೇಶ್ ಛಗ್ ಒಟ್ಟು ಪ್ರತಿಭಟನೆಯ ಮಾಸ್ಟರ್ ಮೈಂಡ್. ಅವರು ವಿವಿ ಆವರಣದಲ್ಲಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡುವಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಒಪ್ಪಿಗೆ ಪಡೆದಿರಲಿಲ್ಲ. ನಿಷೇಧ ಹೇರಿದ ನಂತರವೂ ಪ್ರತಿಭಟನೆ ಆಯೋಜಿಸಿರುವುದು ಅಶಿಸ್ತಿನ ನಡವಳಿಕೆ” ಎಂದು ಸೋಮವಾರ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್‌ಗೆ ವಿವಿ ಆಡಳಿತ ತಿಳಿಸಿತ್ತು.

ಭಾರತದಲ್ಲಿ ಸಾಕ್ಷ್ಯಚಿತ್ರದ ಎರಡು ಭಾಗಗಳ ಪ್ರದರ್ಶನವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎನ್ನುವ ಸುದ್ದಿ ಪತ್ರಿಕೆಗಳ ಮಾಹಿತಿ ನೋಡಿದ ನಂತರ ವಿದ್ಯಾರ್ಥಿಯ ಮೇಲೆ ಕ್ರಮ ಕೈಗೊಂಡಿದ್ದೇವೆ ಎಂದು ವಿವಿ ಆಡಳಿತ ನ್ಯಾಯಾಲಯದ ಮುಂದೆ ಸಮರ್ಥಿಸಿಕೊಂಡಿತ್ತು.

ದೆಹಲಿ ವಿವಿ ಪರವಾಗಿ ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದರು. ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಕೀಲರಾದ ನಮನ್ ಜೋಶಿ, ರಿತಿಕಾ ವೋರಾ ಹಾಗೂ ಅಧಿಕ್ ಚಿಮ್ನಿ ಅವರು ಲೋಕೇಶ್ ಛಗ್ ಪರವಾಗಿ ವಾದಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...